
ಭೋಪಾಲ್: ಮಧ್ಯಪ್ರದೇಶ ರಾಜ್ಯದ ಭೋಪಾಲ್ ನ ಪ್ಲಾಸ್ಟಿಕ್ ಕಾರ್ಖಾನೆಯೊಂದರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿರುವ ಘಟನೆ ಸೋಮವಾರ ಬೆಳಗಿನ ಜಾವ ನಡೆದಿದೆ.
ಹನುಮಾನ್ ಗುಂಜ್ ನಲ್ಲಿರುವ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಅಗ್ನಿ ಅನಾಹುತ ಸಂಭವಿಸಿದ್ದು, ಸ್ಥಳಕ್ಕೆ ಆಗಮಿಸಿರುವ 35ಕ್ಕೂ ಹೆಚ್ಚು ಅಗ್ನಿಶಾಮಕ ದಳದ ವಾಹನಗಳು ಬೆಂಕಿ ನಂದಿಸುವ ಕಾರ್ಯಾಚರಣೆಯನ್ನು ನಡೆಸುತ್ತಿದೆ.
ಇಂದು ಬೆಳಿಗ್ಗೆ 2 ಗಂಟೆ ಸುಮಾರಿಗೆ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಕರೆ ಮಾಡಿ ಮಾಹಿತಿ ನೀಡಲಾಯಿತು. ಆದರೆ, ಕರೆ ಮಾಡಿ 2 ಗಂಟೆಗಳ ಬಳಿಕ ಸ್ಥಳಕ್ಕೆ ಅಧಿಕಾರಿಗಳು ಬಂದರು. ಸ್ಥಳಕ್ಕೆ ಅಧಿಕಾರಿಗಳು ಸರಿಯಾದ ಸಮಯಕ್ಕೆ ಬರಲಿಲ್ಲ ಎಂದು ಸ್ಥಳೀಯರು ಆರೋಪ ವ್ಯಕ್ತಪಡಿಸಿದ್ದಾರೆ.
ಬೆಳಗಿನ ಜಾವ 4 ಗಂಟೆಯಿಂದಲೇ ಕಾರ್ಯಾಚರಣೆಯನ್ನು ಆರಂಭಿಸಲಾಗಿತ್ತು. ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಬರಲಾಯಿತು. ಬೆಂಕಿ ನಿಯಂತ್ರಣಕ್ಕೆ ತರಲು ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
Advertisement