ಕಾಶ್ಮೀರ: 3 ಶಾಲೆಗಳಿಗೆ ಬೆಂಕಿ ಇಟ್ಟ ದುಷ್ಕರ್ಮಿಗಳು

ಉಗ್ರ ಬುರ್ಹಾನ್ ಹತ್ಯೆ ಖಂಡಿಸಿ ನಡೆಯುತ್ತಿರುವ ಹಿಂಸಾಚಾರಕ್ಕೆ ಈಗಾಗಲೇ ನಲುಗಿ ಹೋಗಿರುವ ಕಾಶ್ಮೀರದಲ್ಲಿ ಮತ್ತೆ ದುಷ್ಕರ್ಮಿಗಳು ತಮ್ಮ ಅಟ್ಟಹಾಸವನ್ನು ಮೆರೆದಿದ್ದು, ಕಳೆದ 24 ಗಂಟೆಗಳಲ್ಲಿ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಶ್ರೀನಗರ: ಉಗ್ರ ಬುರ್ಹಾನ್ ವಾನಿ ಹತ್ಯೆ ಖಂಡಿಸಿ ನಡೆಯುತ್ತಿರುವ ಹಿಂಸಾಚಾರಕ್ಕೆ ಈಗಾಗಲೇ ನಲುಗಿ ಹೋಗಿರುವ ಕಾಶ್ಮೀರದಲ್ಲಿ ಮತ್ತೆ ದುಷ್ಕರ್ಮಿಗಳು ತಮ್ಮ ಅಟ್ಟಹಾಸವನ್ನು ಮೆರೆದಿದ್ದು, ಕಳೆದ 24 ಗಂಟೆಗಳಲ್ಲಿ 3 ಶಾಲೆ ಕಟ್ಟಡಗಳಿಗೆ ಬೆಂಕಿ ಹಚ್ಚಿದ್ದಾರೆ.

ನೂರ್ ಬಾಗ್ ಪ್ರದೇಶದಲ್ಲಿರುವ ಸರ್ಕಾರಿ ಶಾಲೆ, ಅನಂತನಾಗ್ ಜಿಲ್ಲೆಯಲ್ಲಿರುವ ಸರ್ಕಾರಿ ಶಾಲೆ ಹಾಗೂ ಬಂಡಿಪೊರ ಜಿಲ್ಲೆಯಲ್ಲಿರುವ ಸರ್ಕಾರಿ ಮಾಧ್ಯಮಿಕ ಶಾಲಾ ಕಟ್ಟಡಗಳಿಗೆ ಅನಾಮಧೇಯ ವ್ಯಕ್ತಿಗಳು ಬೆಂಕಿ ಹಚ್ಚಿದ್ದಾರೆ.

ಸೋಮವಾರ ಅನಂತ್ ನಾಗ್ ಜಿಲ್ಲೆ ಹಾಗೂ ಬಂಡೀಪೊರ ಜಿಲ್ಲೆಯಲ್ಲಿರುವ ಸರ್ಕಾರಿ ಶಾಲೆಗಳಿಗೆ ಬೆಂಕಿ ಹಚ್ಚಲಾಗಿತ್ತು. ಶಾಲಾ ಸಿಬ್ಬಂದಿಗಳ ಸಮಯ ಪ್ರಜ್ಞೆಯಿಂದಾಗಿ ಕೂಡಲೇ ಅಗ್ನಿ ಶಾಮಕ ದಳದ ಸಿಬ್ಬಂದಿಗಳಿಗೆ ಮಾಹಿತಿ ನೀಡಿ ಬೆಂಕಿ ನಂದಿಸಲಾಗಿತ್ತು.

ಈ ಘಟನೆ ಬಳಿಕ ಇಂದು ಬೆಳಿಗ್ಗೆ ಕೂಡ ಅನಾಮಧೇಯ ವ್ಯಕ್ತಿಗಳು ನೂರ್ಬಾಘ್ ನಲ್ಲಿರುವ ಶಾಲೆಗೆ ಬೆಂಕಿ ಹಚ್ಚಿದ್ದಾರೆ. ಸ್ಥಳಕ್ಕಾಗಮಿಸಿರುವ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿರುವ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ. ಕಟ್ಟಡದಲ್ಲಿದ್ದ ಬಹುತೇಕ ಪೀಠೋಪಕರಣಗಳು ಬೆಂಕಿಗೆ ಆಹುತಿಯಾಗಿವೆ ಎಂದು ವರದಿಗಳು ತಿಳಿಸಿವೆ.

24 ಗಂಟೆಗಳಲ್ಲಿ ಮೂರು ಶಾಲೆಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಈ ಎಲ್ಲಾ ಘಟನೆಗಳನ್ನು ಆಧರಿಸಿ ಇದೀಗ ಶಾಲೆಗಳಿಗೆ ನೀಡಲಾಗಿರುವ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com