

ಲಖನೌ: ಉತ್ತರ ಪ್ರದೇಶದ ಆಡಳಿತಾರೂಢ ಸಮಾಜವಾದಿ ಪಕ್ಷದಲ್ಲಿ ಭಿನ್ನಾಭಿಪ್ರಾಯ, ಅಸ್ಥಿರತೆ ಉಂಟಾಗಿದ್ದ ಹಿನ್ನೆಲೆಯಲ್ಲಿ ಅಖಿಲೇಶ್ ಯಾದವ್ ಅ.26 ರಂದು ರಾಜ್ಯಪಾಲ ರಾಮ್ ನಾಯ್ಕ್ ಅವರನ್ನು ಭೇಟಿ ಮಾಡಿದ್ದು ರಾಜಕೀಯ ಸ್ಥಿತಿಯ ಬಗ್ಗೆ ವಿವರಣೆ ನೀಡಿದ್ದಾರೆ.
ರಾಜಕೀಯ ಅಸ್ಥಿರತೆ ಉಂಟಾಗಿದ್ದ ಹಿನ್ನೆಲೆಯಲ್ಲಿ ಅಖಿಲೇಶ್ ಯಾದವ್- ರಾಜ್ಯಪಾಲರ ಭೇಟಿ ಕುತೂಹಲ ಮೂಡಿಸಿತ್ತು. ನವೆಂಬರ್ 3 ರಂದು ರಥಯಾತ್ರೆಯನ್ನು ಹಮ್ಮಿಕೊಂಡಿದ್ದ ಅಖಿಲೇಶ್ ಯಾದವ್ ಪಕ್ಷದ ಶಾಸಕರೊಂದಿಗೆ ಸಭೆ ನಿಗದಿಯಾಗಿದ್ದ ಸಂದರ್ಭದಲ್ಲೇ ಅಖಿಲೇಶ್ ಯಾದವ್ ರಾಜ್ಯಪಾಲರನ್ನು ಭೇಟಿ ಮಾಡಿದ್ದು ಹಲವು ಊಹಾಪೋಹಗಳಿಗೆ ಕಾರಣವಾಗಿತ್ತು. ಇನ್ನು ಸಮಾಜವಾದಿ ಪಕ್ಷದ ಮೂಲಗಳ ಪ್ರಕಾರ ಶಿವಪಾಲ್ ಯಾದವ್ ಸೇರಿದಂತೆ 4 ಸಚಿವರನ್ನು ವಜಾಗೊಳಿಸಿದ್ದ ಹಿನ್ನೆಲೆಯಲ್ಲಿ ಸಚಿವ ಸ್ಥಾನ ತೆರವುಗೊಂಡಿದೆ ಈ ಹಿನ್ನೆಲೆಯಲ್ಲಿ ಅಖಿಲೇಶ್ ಯಾದವ್ ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.