ಜೆಎನ್ ಯು ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ನಿಗೂಢ ಸಾವು!

ದೆಹಲಿಯ ಪ್ರತಿಷ್ಛಿತ ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯದ ಆವರಣದಲ್ಲಿರುವ ವಿದ್ಯಾರ್ಥಿನಿಲಯದಲ್ಲಿ ಸಂಶೋಧನಾ ವಿದ್ಯಾರ್ಥಿಯೋರ್ವ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಹೇಳಲಾಗುತ್ತಿದೆ.
ಜೆಎನ್ ಯು ವಿವಿ ವಿದ್ಯಾರ್ಥಿ ನಿಲಯ (ಸಂಗ್ರಹ ಚಿತ್ರ)
ಜೆಎನ್ ಯು ವಿವಿ ವಿದ್ಯಾರ್ಥಿ ನಿಲಯ (ಸಂಗ್ರಹ ಚಿತ್ರ)
Updated on

ನವದೆಹಲಿ: ದೆಹಲಿಯ ಪ್ರತಿಷ್ಛಿತ ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯದ ಆವರಣದಲ್ಲಿರುವ ವಿದ್ಯಾರ್ಥಿನಿಲಯದಲ್ಲಿ ಸಂಶೋಧನಾ ವಿದ್ಯಾರ್ಥಿಯೋರ್ವ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಹೇಳಲಾಗುತ್ತಿದೆ.

ಮಂಗಳವಾರ ಸಂಜೆ ವಿದ್ಯಾರ್ಥಿ ಮಣಿಪುರ ಮೂಲದ ಜೆಆರ್ ಫಿಲೆಮಾನ್ ಎಂಬಾತ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಹೇಳಲಾಗುತ್ತಿದ್ದು, ಹಾಸ್ಟೆಲ್ ಕೊಠಡಿಯಲ್ಲಿ ಪಿಎಚ್ ಡಿ ವಿದ್ಯಾರ್ಥಿ ಶವ ಪತ್ತೆಯಾಗಿದೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ, ಕಳೆದ ಮೂರು ದಿನಗಳಿಂದ ವಿದ್ಯಾರ್ಥಿ ನಾಪತ್ತೆಯಾಗಿದ್ದ ಎಂದು ಆತನ ಸಹಪಾಠಿಗಳು ತಿಳಿಸಿದ್ದಾರೆ. ವಿವಿ ಆವರಣದಲ್ಲಿರುವ ಬ್ರಹ್ಮಪುತ್ರ ವಿದ್ಯಾರ್ಥಿನಿಲಯದ  ಕೊಠಡಿಯಲ್ಲಿ ವಿದ್ಯಾರ್ಥಿ ಫಿಲೆಮಾನ್ ಶವಪತ್ತೆಯಾಗಿದ್ದು, ಶವ ಕಂಡ ಕೂಡಲೇ ವಿದ್ಯಾರ್ಥಿಗಳು ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ.

ಘಟನಾ ಸ್ಥಳಕ್ಕೆ ಧಾವಿಸಿರುವ ಜೆಎನ್ ಯು ಪೊಲೀಸರು ಶವದ ಮಹಜರು ಮಾಡಿದ್ದಾರೆ. ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಎಬಿವಿಪಿ ಸಂಘಟನೆಯೊಂದಿಗೆ ಜಗಳ ಮಾಡಿಕೊಂಡಿದ್ದ ನಜೀಬ್ ಅಹ್ಮದ್ ಎಂಬಾತ ಕೂಡ ಈ ಹಿಂದೆ ನಾಪತ್ತೆಯಾಗಿದ್ದ. ಈ ಹಿನ್ನಲೆಯ ಆತನಮ ಪೋಷಕರು ಹಾಗೂ ವಿದ್ಯಾರ್ಥಿಗಳು ಕಳೆದ  ಅಕ್ಟೋಬರ್ 15ರಂದು ಭಾರಿ ಪ್ರತಿಭಟನೆ ನಡೆಸಿದ್ದರು. ಇದೇ ಕಾರಣಕ್ಕೆ ವಿವಿಯ ಉಪಕುಲಪತಿಗಳನ್ನು ಹಾಗೂ ಇತರೆ ಅಧಿಕಾರಿಗಳನ್ನು ಪ್ರತಿಭಟನಾಕಾರರು ಕೊಠಡಿಯಲ್ಲಿ ಕೂಡಿ ಹಾಕಿ ಪ್ರತಿಭಟನೆ ನಡೆಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com