

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರನ್ನು ಶೂಟ್ ಮಾಡಿ ಕೊಲ್ಲುವುದಾಗಿ ಪೊಲೀಸ್ ಕಂಟ್ರೋಲ್ ರೂಂ ಗೆ ಬೆದರಿಕೆ ಕರೆಯೊಂದು ಬಂದಿದೆ.
ಬುಧವಾರ ಸಂಜೆ 6.16 ಕ್ಕೆ ದೆಹಲಿ ಪೊಲೀಸ್ ಕಂಟ್ರೋಲ್ ರೂಂ ಗೆ ಕರೆ ಮಾಡಿದ ವ್ಯಕ್ತಿ ಕೇಜ್ರಿವಾಲ್ ರನ್ನು ಕೊಲ್ಲುವ ಬೆದರಿಕೆ ಹಾಕಿದ್ದಾನೆ. ನಂತರ ವಿಚಾರಣೆ ನಡೆಸಿದಾಗ ಅದೊಂದು ಹುಸಿ ಕರೆ ಎಂಬುದಾಗಿ ತಿಳಿದು ಬಂದಿದೆ.
ಆತನ ವಿಳಾಸ ಹುಡುಕಿ ಪೊಲೀಸರು ಆತನ ಮನೆಗೆ ತೆರಳಿದ್ದಾರೆ. ಆತನೊಬ್ಬ ಕುಡುಕನಾಗಿದ್ದು, ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾನೆ ಎಂದು ನೆರೆಹೊರೆಯವರು ತಿಳಿಸಿದ್ದಾರೆ. ಇದುವರೆಗೂ ಆತ ಪೊಲೀಸರಿಗೆ ಸಿಕ್ಕಿಲ್ಲ.