
ರಜೌರಿ: ಭಾರತ ಮತ್ತು ಪಾಕಿಸ್ತಾನ ಗಡಿ ನಿಯಂತ್ರಣ ರೇಖೆ ಬಳಿಯಿದ್ದ ಉಗ್ರರ ನೆಲೆಗಳ ಮೇಲೆ ಜಮ್ಮು ಮತ್ತು ಕಾಶ್ಮೀರದ ಪೊಲೀಸರು ದಾಳಿ ಮಾಡಿದ್ದು, ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ಹಾಗೂ ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆಂದು ಗುರುವಾರ ತಿಳಿದುಬಂದಿದೆ.
ಗಡಿಯಲ್ಲಿ ಉಗ್ರರು ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸುತ್ತಿದ್ದು, ಭಾರತದಲ್ಲಿ ದೊಡ್ಡ ಮಟ್ಟದಲ್ಲಿ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದರು. ಈ ಬಗ್ಗೆ ಖಚಿತ ಮಾಹಿತಿ ತಿಳಿದ ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಿನ್ನೆ ಬಿಎಸ್ಎಫ್ ಯೋಧರೊಂದಿಗೆ ಜಂಟಿಯಾಗಿ ಕಾರ್ಯಾಚರಣೆಗಿಳಿದಿದ್ದರು.
ಕಾರ್ಯಾಚರಣೆ ವೇಳೆ ಗಣಿ ಅರಣ್ಯ ಪ್ರದೇಶದ ಬಳಿ ಇದ್ದ ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿದ್ದಾರೆ. ಈ ವೇಳೆ ಚೀನಾದ ದೇಶದ ಮೂರು ಬಂದೂಕುಗಳು, ಮೂರು ನಿಯತಕಾಲಿಕೆಗಳು, 120 ಬಂದೂಕಿನ ಗುಂಡುಗಳು, 15 ಮೀ ಕಾರ್ಡೆಕ್ಸ್ ವೈಯರ್, 1 ಐಇಡಿ ಟೈಮರ್, 1 ವೈಯರ್ ಲೆಸ್ ಫೋನ್, ಚಾರ್ಜರ್ ಹಾಗೂ ಭಾರೀ ಪ್ರಮಾಣದ ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆಂದು ಹೇಳಲಾಗುತ್ತಿದೆ.
ಇನ್ನು ಈ ಬಗ್ಗೆ ಬಿಎಸ್ಎಫ್ ವಕ್ತಾರರು ಮಾಹಿತಿ ನೀಡಿದ್ದು, ಖಚಿತ ಮಾಹಿತಿ ಮೇರೆಗೆ ಬಿಎಸ್ಎಫ್ ಯೋಧರು ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಉಗ್ರರ ವಿರುದ್ಧ ಜಂಟಿಯಾಗಿ ಕಾರ್ಯಾಚರಣೆ ನಡೆಸಿತ್ತು ಎಂದು ಹೇಳಿದ್ದಾರೆ.
Advertisement