ರಾಜಕೀಯವು ನೀತಿ-ನಿಯಮಾವಳಿಗಳ ಮೇಲೆ ಸವಾರಿ ಮಾಡಲು ಅವಕಾಶ ನೀಡಬಾರದು: ಅಧಿಕಾರಿಗಳಿಗೆ ಮೋದಿ

ರಾಜಕೀಯವು ನೀತಿ-ನಿಯಮಾವಳಿಗಳ ಮೇಲೆ ಸವಾರಿ ಮಾಡಲು ಅವಕಾಶ ನೀಡಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಯುವ ಐಎಎಸ್ ಅಧಿಕಾರಿಗಳಿಗೆ ಕಿವಿಮಾತು ಹೇಳಿದ್ದಾರೆ.
ನರೇಂದ್ರ ಮೋದಿ
ನರೇಂದ್ರ ಮೋದಿ

ನವದೆಹಲಿ: ರಾಜಕೀಯವು ನೀತಿ-ನಿಯಮಾವಳಿಗಳ ಮೇಲೆ ಸವಾರಿ ಮಾಡಲು ಅವಕಾಶ ನೀಡಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಯುವ ಐಎಎಸ್ ಅಧಿಕಾರಿಗಳಿಗೆ ಕಿವಿಮಾತು ಹೇಳಿದ್ದಾರೆ.

ನವದೆಹಲಿಯಲ್ಲಿ ಯುವ ಐಎಎಸ್ ಅಧಿಕಾರಿಗಳೊಂದಿಗೆ ಸಂವಹನ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಯುವ ಅಧಿಕಾರಿಗಳು ಸಾಂಘಿಕ ಸ್ಫೂರ್ತಿಯನ್ನು ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದ್ದು, ರಾಜಕೀಯವು ನೀತಿ- ನಿಯಮಾವಳಿಗಳ ಮೇಲೆ ಸವಾರಿ ಮಾಡಲು ಅವಕಾಶ ನೀಡಬಾರದು ಎಂದು ಕರೆ ನೀಡಿದ್ದಾರೆ.

ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ರಾಷ್ಟ್ರಕ್ಕೆ ವಿರುದ್ಧವಾಗಿರಬಾರದು ಹಾಗೂ ಬಡವರಿಗೆ ಯಾವುದೇ ಕಾರಣಕ್ಕೂ ಹಾನಿಯಾಗಬಾರದು ಎಂಬ ವಿಷಯಗಳನ್ನು ಗಮನದಲ್ಲಿರಿಸಿಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಯುವ ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ. 2014 ರ ಬ್ಯಾಚ್ ನ ಐಎಎಸ್ ಅಧಿಕಾರಿಗಳು ಮೂರೂ ತಿಂಗಳ ಸಹಾಯಕ ಕಾರ್ಯದರ್ಶಿಗಳ ತರಬೇತಿಯನ್ನು ಪೂರ್ಣಗೊಳಿಸಿ, ಡಿಬಿಟಿ, ಸ್ವಚ್ಛ ಭಾರತ, ಇ-ಕೋರ್ಟ್ಸ್ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಪ್ರಧಾನಿ ಮೋದಿ ಅವರಿಗೆ 8 ಪ್ರಸ್ತುತಿಗಳನ್ನು ನೀಡಿದ್ದು, ಆಳವಾದ ಅಧ್ಯಯನವುಳ್ಳ ಪ್ರಸ್ತುತಿಗಳನ್ನು ಮಂಡಿಸಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಯುವ ಅಧಿಕಾರಿಗಳನ್ನು ಶ್ಲಾಘಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com