ಗಡಿಯಲ್ಲಿ ಅಪ್ರಚೋದಿತ ಗುಂಡಿನ ದಾಳಿ: 15 ಪಾಕಿಸ್ತಾನ ಸೈನಿಕರ ಹತ್ಯೆ

ಜಮ್ಮು ಮತ್ತು ಕಾಶ್ಮೀರ ಗಡಿಯಲ್ಲಿ ಪದೇಪದೇ ಕದನ ವಿರಾಮ ಉಲ್ಲಂಘನೆ ಹಾಗೂ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿರುವ ಪಾಕಿಸ್ತಾನ ಸೇನೆಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಜಮ್ಮು: ಜಮ್ಮು ಮತ್ತು ಕಾಶ್ಮೀರ ಗಡಿಯಲ್ಲಿ ಪದೇಪದೇ ಕದನ ವಿರಾಮ ಉಲ್ಲಂಘನೆ ಹಾಗೂ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿರುವ ಪಾಕಿಸ್ತಾನ ಸೇನೆಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡಿದ್ದು, 15 ಪಾಕಿಸ್ತಾನ ಯೋಧರನ್ನು ಹತ್ಯೆ ಮಾಡಿದೆ ಎಂದು ಶುಕ್ರವಾರ ತಿಳಿದುಬಂದಿದೆ.

ಗಡಿ ಪರಿಸ್ಥಿತಿ ಕುರಿತಂತೆ ಬಿಎಸ್ಎಫ್ ಹಿರಿಯ ಅಧಿಕಾರಿ ಅರುಣ್ ಕುಮಾರ್ ಮಾತನಾಡಿದ್ದು, ಗಡಿಯಲ್ಲಿ ಪಾಕಿಸ್ತಾನ ಸೇನೆ ಪದೇಪದೇ ಕದನ ವಿರಾಮವನ್ನು ಉಲ್ಲಂಘಿಸುತ್ತಲೇ ಇದೆ. ಪಾಕಿಸ್ತಾನ ಸೇನೆಯ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡಿದ್ದು, ಈ ವರೆಗೂ 15 ಪಾಕಿಸ್ತಾನ ಸೈನಿಕರನ್ನು ಹತ್ಯೆ ಮಾಡಿದೆ. ಜಮ್ಮುವಿನ ಅಂತರಾಷ್ಟ್ರೀಯ ಗಡಿಯೊಂದರಲ್ಲಿಯೇ 7 ಪಾಕಿಸ್ತಾನ ಸೈನಿಕರನ್ನು ಬಿಎಸ್ಎಫ್ ಹತ್ಯೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಎರಡು ದಿನಗಳ ಹಿಂದಷ್ಟೇ ಪಾಕಿಸ್ತಾನ ಸೈನಿಕರು ಉಗ್ರರಿಗೆ ಗಡಿ ನುಸುಳಲು ಸಹಾಯ ಮಾಡುತ್ತಿದ್ದರು. ಈ ವೇಳೆ ಭಾರತೀಯ ಸೇನೆ ದಿಟ್ಟ ಉತ್ತರ ನೀಡುವ ಮೂಲಕ ಗಡಿ ನುಸುಳುವ ಪ್ರಯತ್ನಗಳನ್ನು ವಿಫಲವಾಗುವಂತೆ ಮಾಡಲಾಗಿತ್ತು.

ರಜೌರಿ, ಸಾಂಬಾ, ಅಬ್ದುಲಿಯಾ, ಆರ್.ಎಸ್.ಪುರ ಮತ್ತು ಸುಚೆಟ್ಗರ್ಹ್ ಗಳಲ್ಲಿ ಕಳೆದ 24 ಗಂಟೆಗಳಿಂದಲೂ ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿಯನ್ನು ನಡೆಸುತ್ತಿದೆ. ನೌಶೆರಾ, ಸುಂದರ್ಬಾನಿ ಮತ್ತು ಪಲ್ಲಾನ್ವಾಲಾ ಜಿಲ್ಲೆಗಳಲ್ಲಿ ಬೆಳಿಗ್ಗೆ 5 ಗಂಟೆ ಸುಮಾರಿಗೆ ಪಾಕಿಸ್ತಾನ ಸೇನೆ ಶೆಲ್ ಗಳ ದಾಳಿ ನಡೆಸಿ, ಕದನ ವಿರಾಮವನ್ನು ಉಲ್ಲಂಘಿಸಿದೆ.

ನಿನ್ನೆ ಆರ್.ಎಸ್.ಪುರ ಸೆಕ್ಟರ್ ಬಳಿ ಪಾಕಿಸ್ತಾನ ಸೇನೆ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಗೆ ಬಿಎಸ್ಎಫ್ ಯೋಧ ಜಿತೇಂದರ್ ಸಿಂಗ್(46) ಅವರು ಹುತಾತ್ಮರಾಗಿದ್ದರು. ಕಳೆದ ಐದು ದಿನಗಳಲ್ಲಿ ಪಾಕಿಸ್ತಾನ ಸೇನೆ ನಡೆಸಿದ ಶೆಲ್ ದಾಳಿಗೆ ಮೂವರು ಯೋಧರು ಹುತಾತ್ಮರಾಗಿದ್ದಾರೆ. ಗಡಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಈಗಾಗಲೇ ಗಡಿಯಲ್ಲಿ ಹೈಅಲರ್ಟ್ ಘೋಷಣೆ ಮಾಡಲಾಗಿದೆ ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com