ಮತ್ತೊಬ್ಬ ಐಎಸ್ಐ ಗೂಡಾಚಾರಿ ಬಂಧನ

ರಕ್ಷಣಾ ಇಲಾಖೆಯ ಗೌಪ್ಯ ಮಾಹಿತಿಗಳನ್ನು ಪಾಕಿಸ್ತಾನ ದೇಶಕ್ಕೆ ಬೇಹುಗಾರಿಕೆ ಮಾಡುತ್ತಿದ್ದಾರೆಂದು ಹೇಳಿ ಗುರುವಾರವಷ್ಟೇ ಪಾಕಿಸ್ತಾನ ರಾಯಭಾರಿ ಕಚೇರಿಯ ಅಧಿಕಾರಿಗಳನ್ನು ಬಂಧನಕ್ಕೊಳಪಡಿಸಿ ವಿಚಾರಣೆ ನಡೆಸಲಾಗಿತ್ತು. ಇದರ ಬೆನ್ನಲ್ಲೇ ಮತ್ತೊಬ್ಬ ಐಎಸ್ಐ ಗೂಡಚಾರಿಯೊಬ್ಬನನ್ನು...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ರಕ್ಷಣಾ ಇಲಾಖೆಯ ಗೌಪ್ಯ ಮಾಹಿತಿಗಳನ್ನು ಪಾಕಿಸ್ತಾನ ದೇಶಕ್ಕೆ ಬೇಹುಗಾರಿಕೆ ಮಾಡುತ್ತಿದ್ದಾರೆಂದು ಹೇಳಿ ಗುರುವಾರವಷ್ಟೇ ಪಾಕಿಸ್ತಾನ ರಾಯಭಾರಿ ಕಚೇರಿಯ ಅಧಿಕಾರಿಗಳನ್ನು ಬಂಧನಕ್ಕೊಳಪಡಿಸಿ ವಿಚಾರಣೆ ನಡೆಸಲಾಗಿತ್ತು. ಇದರ ಬೆನ್ನಲ್ಲೇ ಮತ್ತೊಬ್ಬ ಐಎಸ್ಐ ಗೂಡಚಾರಿಯೊಬ್ಬನನ್ನು ಬಂಧನಕ್ಕೊಳಪಡಿಸಿರುವುದಾಗಿ ಶುಕ್ರವಾರ ತಿಳಿದುಬಂದಿದೆ.

ಶೋಯೆಬ್ ಬಂಧಿತ ವ್ಯಕ್ತಿಯಾಗಿದ್ದು, ಈತ ಜೋಧ್ಪುರದಲ್ಲಿ ಪಾಸ್ ಪೋರ್ಟ್ ಮತ್ತು ವೀಸಾ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದ. ಭಾರತದ ಗೌಪ್ಯ ಮಾಹಿತಿಗಳನ್ನು ಪಾಕಿಸ್ತಾನ ಮೂಲದ ಇಸಿಸ್ ಉಗ್ರ ಸಂಘಟನೆಗೆ ರವಾನೆ ಮಾಡುತ್ತಿರುವುದಾಗಿ ಶಂಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಕಳೆದ ರಾತ್ರಿ ಈತನನ್ನು ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

ನಿನ್ನೆಯಷ್ಟೇ ರಕ್ಷಣಾ ಇಲಾಖೆಯ ಮಾಹಿತಿಗಳನ್ನು ಪಾಕಿಸ್ತಾನರಕ್ಕೆ ಬೇಹುಗಾರಿಕೆ ಮಾಡುತ್ತಿದ್ದಾರೆಂದು ಹೇಳಿ ದೆಹಲಿ ಪೊಲೀಸರು ರಾಜಸ್ತಾನ ಮೂಲದ ಸುಭಾಷ್ ಹಾಗೂ ಮೌಲಾನಾ ಎಂಬ ಇಬ್ಬರು ವ್ಯಕ್ತಿಗಳನ್ನು ಬಂಧನಕ್ಕೊಳಪಡಿಸಿದ್ದರು.

ಸುಭಾಷ್ ಮತ್ತು ಮೌಲಾನಾ ನೇಮಕಕ್ಕೆ ಇದೀಗ ಬಂಧನಕ್ಕೊಳಗಾಗಿರುವ ಶೊಯೆಬ್ ಹೊಣೆಗಾರನಾಗಿದ್ದು. ಈತನನ್ನು ಬಂಧಿಸಲಾಗಿದೆ, ಶೀಘ್ರದಲ್ಲೇ ಈತನನ್ನು ದೆಹಲಿಗೆ ಕರೆತರಲಾಗುತ್ತದೆ ಎಂದು ಜಂಟಿ ಪೊಲೀಸ್ ಆಯುಕ್ತ ರವೀಂದ್ರ ಯಾದವ್ ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com