

ಔರಂಗಾಬಾದ್: ಮಹಾರಾಷ್ಟ್ರದ ಔರಂಗಾಬಾದ್ ನಲ್ಲಿ ಪಟಾಕಿ ಮಾರುಕಟ್ಟೆಗೆ ಬೆಂಕಿ ಬಿದ್ದಿದ್ದು 200 ಮಳಿಗೆಗಳು ಹಾಗು 40 ವಾಹನಗಳು ಹಾನಿಗೊಳಗಾಗಿವೆ.
ತಾತ್ಕಾಲಿಕವಾಗಿ ನಿರ್ಮಿಸಲಾಗಿದ್ದ ಮಾರುಕಟ್ಟೆಗೆ ಬೆಂಕಿ ತಗುಲಿದ ಪರಿಣಾಮ ಬೆಂಕಿ ಕಾಣಿಸಿಕೊಂಡಿದ್ದು ಘಟನೆಯಲ್ಲಿ ಮಳಿಗೆಗಳ ಮಾಲಿಕರು ಹಾಗು ಗ್ರಾಹಕರು ಅವಘಡದಿಂದ ತಪ್ಪಿಸಿಕೊಂಡಿದ್ದಾರೆ. ವಾಹನಗಳು ಹಾಗು ಮಳಿಗ್ಗ್ಗಳಿಗೆ ಹಾನಿಯಾಗಿರುವುದನ್ನು ಹೊರತುಪಡಿಸಿದರೆ ಅದೃಷ್ಟವಶಾತ್ ಯಾವುದೇ ಜೀವ ಹಾನಿ ಸಂಭವಿಸಿಲ್ಲ.
ಮಾರುಕಟ್ಟೆಯ ಬಳಿ ನಿಲ್ಲಿಸಲಾಗಿದ್ದ 40 ವಾಹನಗಳು ಬೆಂಕಿಗಾಹುತಿಯಾಗಿ ಸಂಪೂರ್ಣ ಹಾನಿಗೊಳಗಾಗಿದ್ದು, ರಕ್ಷಣಾ ಸಿಬ್ಬಂದಿಗಳು ಕೇವಲ ಒಂದು ಗಂಟೆಯಲ್ಲಿ ಬೆಂಕಿಯನ್ನು ತಹಬದಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ.