ಬಿಹಾರದ ಮುಜಾಫರ್ಪುರದ ಪ್ರಮುಖ ಸರ್ಕಾರಿ ಆಸ್ಪತ್ರೆಯಾಗಿರುವ ಎಸ್ಕೆಎಂಸಿಹೆಚ್ ನಲ್ಲಿ ನವಜಾತ ಶಿಶುವಿನ ಮೃತದೇಹ ನಾಯಿ ಪಾಲಾಗಿದೆ. ಶಿಶುವಿನ ಮೃತದೇಹವನ್ನು ಬಾಯಿಯಲ್ಲಿ ಕಚ್ಚಿಕೊಂಡು ನಾಯಿಯೊಂದು ಓಡುತ್ತಿದ್ದು ಈ ದೃಶ್ಯಗಳನ್ನು ವ್ಯಕ್ತಿಯೊಬ್ಬರು ಮೊಬೈಲ್ ನಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ್ದಾರೆ.