ಕುಪ್ವಾರದಲ್ಲಿ ಅಡಗಿ ಕುಳಿತಿರುವ ಉಗ್ರರು: ಕಾರ್ಯಾಚರಣೆಗಿಳಿದ ಸೇನೆ

ಜಮ್ಮು ಮತ್ತು ಕಾಶ್ಮೀರದ ಕುಪ್ವಾರದ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿದ್ದು, ಉಗ್ರರಿಗಾಗಿ ಭಾರತೀಯ ಸೇನೆ ಕಾರ್ಯಾಚರಣೆ ಆರಂಭಿಸಿದೆ ಎಂದು ಭಾನುವಾರ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರದ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿದ್ದು, ಉಗ್ರರಿಗಾಗಿ ಭಾರತೀಯ ಸೇನೆ ಕಾರ್ಯಾಚರಣೆ ಆರಂಭಿಸಿದೆ ಎಂದು ಭಾನುವಾರ ತಿಳಿದುಬಂದಿದೆ.

ಆರಂಭವಾಗುತ್ತಿದ್ದಂತೆ ಉಗ್ರರು ಸೇನೆ ಮೇಲೆ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದಾರೆ. ಇದರಂತೆ ಯೋಧರು ತಮ್ಮ ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದು, ಸ್ಥಳದಲ್ಲಿ ಭಾರೀ ಪ್ರಮಾಣದಲ್ಲಿ ಗುಂಡಿನ ಚಕಮಕಿಗಳು ನಡೆಯುತ್ತಿದೆ ಎಂದು ಸೇನಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕುಪ್ವಾರದ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿಕುಳಿತಿದ್ದಾರೆಂಬು ಮಾಹಿತಿ ದೊರಕಿತು. ಇದರಂತೆ ಉಗ್ರರ ವಿರುದ್ಧ ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com