ಮುಂಬೈನ ಬಹುಮಹಡಿ ವಾಣಿಜ್ಯ ಕಟ್ಟಡದಲ್ಲಿ ಬೆಂಕಿ ಅವಘಡ
ದೇಶ
ಮುಂಬೈನ ಬಹುಮಹಡಿ ವಾಣಿಜ್ಯ ಕಟ್ಟಡದಲ್ಲಿ ಬೆಂಕಿ ಅವಘಡ
ಮುಂಬೈನ ಬಹುಮಹಡಿ ವಾಣಿಜ್ಯ ಕಟ್ಟಡವೊಂದರಲ್ಲಿ ಭಾನುವಾರ ಸಂಜೆ ಬೆಂಕಿ ಅವಘಡ ಸಂಭವಿಸಿದೆ...
ಮುಂಬೈ: ಮುಂಬೈನ ಬಹುಮಹಡಿ ವಾಣಿಜ್ಯ ಕಟ್ಟಡವೊಂದರಲ್ಲಿ ಭಾನುವಾರ ಸಂಜೆ ಬೆಂಕಿ ಅವಘಡ ಸಂಭವಿಸಿದೆ.
ದಕ್ಷಿಣ ಮುಂಬೈನ ಡ್ರೀಮ್ ಲ್ಯಾಂಡ್ ಚಿತ್ರಮಂದಿರದ ಬಳಿರುವ ಬಹುಮಹಡಿ ವಾಣಿಜ್ಯ ಕಟ್ಟಡದಲ್ಲಿ ಕಳೆದ ರಾತ್ರಿ 8.15ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿರುವುದಾಗಿ ತಿಳಿದುಬಂದಿದೆ.
ಮೊದಲನೇ ಮಹಡಿಯಲ್ಲಿ ಕಾಣಿಸಿಕೊಂಡಿದ್ದ ಬೆಂಕಿ ಸಮಯ ಕಳೆಯುತ್ತಿದ್ದಂತೆ ಎರಡನೇ ಮಹಡಿಗೂ ಹಬ್ಬಿದೆ. ಘಟನೆಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ. ಸ್ಥಳಕ್ಕಾಗಮಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ.
ಬೆಂಕಿ ಅವಘಡದಲ್ಲಿ 20ಕ್ಕೂ ಹೆಚ್ಚು ಅಂಗಡಿಗಳು ಭಸ್ಮವಾಗಿವೆ. ಘಟನೆ ಪ್ರಮುಖ ಕಾರಣಗಳು ತಿಳಿದುಬಂದಿಲ್ಲ. ಸ್ಥಳಕ್ಕಾಗಮಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ