ಟೈಮ್ಸ್ ನೌ ವಾಹಿನಿಯ ಪ್ರಧಾನ ಸಂಪಾದಕ ಹುದ್ದೆಗೆ ಅರ್ನಬ್ ಗೋಸ್ವಾಮಿ ರಾಜಿನಾಮೆ

ಟೈಮ್ಸ್ ನೌ ವಾಹಿನಿಯ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ತಮ್ಮ ಹುದ್ದೆಗೆ ರಾಜಿನಾಮೆ ನೀಡಿದ್ದಾರೆ...
ಅರ್ನಬ್ ಗೋಸ್ವಾಮಿ
ಅರ್ನಬ್ ಗೋಸ್ವಾಮಿ
ನವದೆಹಲಿ: ಟೈಮ್ಸ್ ನೌ ವಾಹಿನಿಯ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ತಮ್ಮ ಹುದ್ದೆಗೆ ರಾಜಿನಾಮೆ ನೀಡಿದ್ದಾರೆ. 
ಚರ್ಚಾ ಕಾರ್ಯಕ್ರಮಗಳ ಮೂಲಕ ಜನಪ್ರಿಯತೆ ಪಡೆದಿದ್ದ ಅರ್ನಬ್ ಗೋಸ್ವಾಮಿ ಅವರು ಟೈಮ್ಸ್ ನೌ ಉನ್ನತ ಮಟ್ಟದ ಸಂಪಾದಕೀಯ ಮಂಡಳಿ ಸಭೆಯಲ್ಲಿ ಈ ನಿರ್ಣಯ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ. 
ಅತ್ಯಂತ ಹೆಚ್ಚು ವೀಕ್ಷಿಸಲ್ಪಡುವ ನ್ಯೂಸ್ ಶೋ ಚರ್ಚಾ ಕಾರ್ಯಕ್ರಮವನ್ನು ಕೆಲ ಕಾಲ ಮುಂದುವರೆಸಲು ಅರ್ನಬ್ ಗೋಸ್ವಾಮಿ ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಅರ್ನಬ್ ತಮ್ಮದೇ ಆದ ಹೊಸ ಸಾಹಸಕ್ಕೆ ಕೈ ಹಾಕುವ ಸಾಧ್ಯತೆ ಹೆಚ್ಚಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com