
ನವದೆಹಲಿ: ಭೋಪಾಲ್ ಕೇಂದ್ರ ಜೈಲಿನಿಂದ ತಪ್ಪಿಸಿಕೊಂಡಿದ್ದ ಸಿಮಿ ಉಗ್ರರಿಗೆ ಯಾರೇ ಸಹಾಯ ಮಾಡಿದ್ದರೂ, ಯಾವುದೇ ವ್ಯಕ್ತಿಗಳು ಇದರಲ್ಲಿ ಭಾಗಿಯಾಗಿದ್ದರೂ ಅವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಸೋಮವಾರ ಹೇಳಿದ್ದಾರೆ.
ಸಿಮಿ ಉಗ್ರ ಎನ್ ಕೌಂಟರ್ ಪ್ರಕರಣ ಕುರಿತಂತೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಭೋಪಾಲ್ ಕೇಂದ್ರ ಜೈಲಿನಿಂದ ಪರಾರಿಯಾಗಿದ್ದ ಉಗ್ರರಿಗೆ ಯಾವುದೇ ವ್ಯಕ್ತಿಗಳು ಸಹಾಯ ಮಾಡಿದ್ದರೂ ಅವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ, ಉಗ್ರರು ತಪ್ಪಿಸಿಕೊಂಡಿರುವುದು ಗಂಭೀರವಾದ ವಿಚಾರವಾಗಿದ್ದು, ಪ್ರಕರಣದಲ್ಲಿ ಭಾಗಿಯಾದವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಹೇಳಿದ್ದಾರೆ.
ಇದೇ ವೇಳೆ ಉಗ್ರರನ್ನು ಪತ್ತೆ ಹಚ್ಚಲು ಪ್ರಮುಖ ಪಾತ್ರ ವಹಿಸಿದ ಸ್ಥಳೀಯರನ್ನು ಪ್ರಶಂಸಿಸಿದ್ದಾರೆ. ಅಲ್ಲದೆ, ಪ್ರತಿಪಕ್ಷಗಳ ಟೀಕೆಗಳ ವಿರುದ್ಧ ಕಿಡಿಕಾಡಿರುವ ಅವರು, ಪ್ರಕರಣದಲ್ಲಿ ರಾಜಕೀಯ ಮಾಡದಂತೆ ಒತ್ತಾಯಿಸಿದ್ದಾರೆ.
Advertisement