ಪ್ರಧಾನಿ ನರೇಂದ್ರ ಮೋದಿ ಮತ್ತು ಈಜಿಪ್ಟ್ ಅಧ್ಯಕ್ಷ
ದೇಶ
ಏಷ್ಯಾ ಮತ್ತು ಆಫ್ರಿಕಾ ನಡುವೆ ಈಜಿಪ್ಟ್ ಪ್ರಾಕೃತಿಕ ಸೇತುವೆ: ಪ್ರಧಾನಿ ಮೋದಿ
ಏಷ್ಯಾ ಮತ್ತು ಆಫ್ರಿಕಾ ಖಂಡಗಳಿಗೆ ಈಜಿಪ್ಟ್ ಸ್ವಾಭಾವಿಕ ಸೇತವೆಯಾಗಿ ಕೆಲಸ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ....
ನವದೆಹಲಿ: ಏಷ್ಯಾ ಮತ್ತು ಆಫ್ರಿಕಾ ಖಂಡಗಳಿಗೆ ಈಜಿಪ್ಟ್ ಸ್ವಾಭಾವಿಕ ಸೇತವೆಯಾಗಿ ಕೆಲಸ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.
ಈಜಿಪ್ಟ್ ಅಧ್ಯಕ್ಷ ಅಬ್ಜೇಲ್ ಫತ್ತಾ ಮೂರು ದಿನಗಳ ಭಾರತದ ಪ್ರವಾಸದಲ್ಲಿದ್ದಾರೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ದ್ವಿಪಕ್ಷೀಯ ಮಾತುಕತೆ ನಡೆಸಿದರು.
ಈಜಿಪ್ಟ್ ಅಧ್ಯಕ್ಷರೊಂದಿಗೆ ಚರ್ಚೆ ನಡೆಸಿದ್ದೇನೆ, ಸಹಕಾರ ತತ್ವಗಳಿಗೆ ಬದ್ದರಾಗಿದ್ದು, ಈ ನಿಟ್ಟಿನಲ್ಲಿ ಎರಡು ದೇಶಗಳ ಬಾಂಧವ್ಯಗಳನ್ನು ಮತ್ತಷ್ಟು ಗಟ್ಟಿಗೊಳಿಸಲಾಗುವುದು ಎಂದು ಮೋದಿ ಹೇಳಿದ್ದಾರೆ.
ಈಜಿಪ್ಟ್ ಪುರಾತನ ಹಾಗೂ ಹೆಮ್ಮೆಯ ನಾಗರಿಕತೆ ಹೊಂದಿರುವ ದೇಶವಾಗಿದ್ದು, ಶ್ರೀಮಂತವಾಗಿರುವ ಸಾಂಸ್ಕೃತಿಯನ್ನು ಪರಸ್ಪರ ಬದಲಾವಣೆ ಮಾಡಿಕೊಳ್ಳಲಾಗುವುದು ಎಂದು ಮೋದಿ ಜಂಟಿ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ