ಬಾರದ ಆ್ಯಂಬುಲೆನ್ಸ್- ವ್ಯಾನ್ ನಲ್ಲೇ ಮಗುವಿಗೆ ಜನ್ಮವಿತ್ತ ಮಹಿಳೆ

ಹೆರಿಗೆ ನೋವಿನಿಂದ ನರಳುತ್ತಿದ್ದ ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯದಲ್ಲೇ ಮಗುವಿಗೆ ಜನ್ಮ ವಿತ್ತಿರುವ ಘಟನೆ ಒಡಿಸ್ಸಾ..
ವ್ಯಾನ್ ನಲ್ಲೇ ಮಗುವಿಗೆ ಜನ್ಮವಿತ್ತ ಮಹಿಳೆ
ವ್ಯಾನ್ ನಲ್ಲೇ ಮಗುವಿಗೆ ಜನ್ಮವಿತ್ತ ಮಹಿಳೆ
Updated on

ರಾಯಗಡ: ಹೆರಿಗೆ ನೋವಿನಿಂದ ನರಳುತ್ತಿದ್ದ ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯದಲ್ಲೇ ಮಗುವಿಗೆ ಜನ್ಮ ವಿತ್ತಿರುವ ಘಟನೆ ಒಡಿಸ್ಸಾದ ರಾಯಗಡದಲ್ಲಿ ನಡೆದಿದೆ.

ಪಾಲಕಾಮನ ಹಳ್ಳಿಯ ಸುನಿತಾ ಭಾತ್ರಿಯಾ ಎಂಬಾಕೆಗೆ ಹೆರಿಗೆ ನೋವು ಆರಂಭವಾಗಿತ್ತು. ಈ ವೇಳೆ ಆಕೆಯ ಪತಿ ಅಂಯಬುಲೆನ್ಸ್ ಗೆ ಕರೆ ಮಾಡಿದ್ದಾರೆ. ಈ ವೇಳೆ ಆ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬರಲಿಲ್ಲ, ಹೀಗಾಗಿ ಖಾಸಗಿ ವ್ಯಾನ್ ನಲ್ಲಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರು.

ಈ ವೇಳೆ ಮಾರ್ಗ ಮಧ್ಯದಲ್ಲೇ ಆಕೆ ಮಗುವಿಗೆ ಜನ್ಮ ವಿತ್ತಿದ್ದಾಳೆ. ನಂತರ ಅಲ್ಲಿಂದ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನಿಸಿದ್ದಾರೆ. ಮಗು ಮತ್ತು ತಾಯಿ ಆರೋಗ್ಯವಾಗಿದ್ದಾರೆ.

ಇನ್ನೂ ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಜಿಲ್ಲಾಧಿಕಾರಿ ಪರಿಶೀಲನೆ ನಡೆಸಿ ತುರ್ತು ಸೇವೆಗಳು ನಿರ್ಲಕ್ಷ್ಯ ಮಾಡಿದ್ದು ಕಂಡು ಬಂದರೇ ಅಂತವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com