

ನವದೆಹಲಿ: ಸೆಕ್ಸ್ ಸ್ಕ್ಯಾಂಡಲ್ ಸಂಬಂಧ ಸಚಿವ ಸ್ಥಾನದಿಂದ ವಜಾಗೊಂಡಿರುವ ಸಂದೀಪ್ ಕುಮಾರ್ ಅವರ ಪ್ರಾಥಮಿಕ ಸದಸ್ಯತ್ವವನ್ನು ಆಮ್ ಆದ್ಮಿ ಪಕ್ಷ ಅಮಾನತುಗೊಳಿಸಿದೆ.
ಶನಿವಾರ ನಡೆದ ಆಮ್ ಆದ್ಮಿ ಪಕ್ಷದ ಸಭೆಯಲ್ಲಿ ಸಂದೀಪ್ ಕುಮಾರ್ ಅವರ ಪ್ರಾಥಮಿಕ ಸದಸ್ಯತ್ವವನ್ನು ರದ್ದುಗೊಳಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದ್ದು, ಪಕ್ಷದಿಂದ ಉಚ್ಛಾಟಿಸುವ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಆಮ್ ಆದ್ಮಿ ಪಕ್ಷದ ಸಂಚಾಲಕರಾದ ದಿಲೀಪ್ ಪಾಂಡೆ ತಿಳಿಸಿದ್ದಾರೆ.
ಸಂದೀಪ್ ಕುಮಾರ್ ಅವರು ಮಹಿಳೆಯರ ಜೊತೆ ಚೆಲ್ಲಾಟವಾಡುತ್ತಿರುವ ಸಿಡಿಯೊಂದು ಬಹಿರಂಗವಾಗುತ್ತಿದ್ದಂತೆ ಸಿಎಂ ಕೇಜ್ರಿವಾಲ್ ಅವರು ಸಂದೀಪ್ ಅವರನ್ನು ಸಂಪುಟದಿಂದ ವಜಾ ಮಾಡಿದ್ದರು. ಆದರೆ 'ನಾನು ದಲಿತ ಎಂಬ ಕಾರಣಕ್ಕೆ ನನ್ನನ್ನು ಟಾರ್ಗೆಟ್ ಮಾಡಲಾಗಿದೆ ಎಂದು ಸಂದೀಪ್ ಕುಮಾರ್ ಹೇಳಿದ್ದರು.