ಸರ್ವಪಕ್ಷ ನಿಯೋಗದೊಂದಿಗೆ ಕಾಶ್ಮೀರಕ್ಕೆ ರಾಜನಾಥ್ ಸಿಂಗ್ ಭೇಟಿ

ಕಾಶ್ಮೀರ ಕಣಿವೆಯಲ್ಲಿ ಶಾಂತಿ ಸ್ಥಾಪನೆ ಮಾಡುವ ಉದ್ದೇಶದಿಂದ ಸರ್ವಪಕ್ಷ ಸಭೆ ನಡೆಸಲು ಕೇಂದ್ರ ಗೃಹ ಸಚಿವ ರಾಜನಾಥ್ 28 ಸದಸ್ಯರೊಂದಿಗೆ ಕಾಶ್ಮೀರಕ್ಕೆ ಭೇಟಿ ನೀಡಿದ್ದಾರೆ.
ರಾಜನಾಥ್ ಸಿಂಗ್
ರಾಜನಾಥ್ ಸಿಂಗ್

ನವದೆಹಲಿ: ಕಾಶ್ಮೀರ ಕಣಿವೆಯಲ್ಲಿ ಶಾಂತಿ ಸ್ಥಾಪನೆ ಮಾಡುವ ಉದ್ದೇಶದಿಂದ ಸರ್ವಪಕ್ಷ ಸಭೆ ನಡೆಸಲು ಕೇಂದ್ರ ಗೃಹ ಸಚಿವ ರಾಜನಾಥ್ 28 ಸದಸ್ಯರೊಂದಿಗೆ ಕಾಶ್ಮೀರಕ್ಕೆ ಭೇಟಿ ನೀಡಿದ್ದಾರೆ.

ಸರ್ವಪಕ್ಷನಿಯೋಗದೊಂದಿಗೆ ಕಾಶ್ಮೀರಕ್ಕೆ ತೆರಳಿರುವ ರಾಜನಾಥ್ ಸಿಂಗ್, ಕಾಶ್ಮೀರದಲ್ಲಿ ಶಾಂತಿ ನೆಲೆಸುವ ಉದ್ದೇಶ ಹೊಂದಿರುವ ಸಂಘಟನೆಗಳು ಹಾಗು ವ್ಯಕ್ತಿಗಳೊಂದಿಗೆ ಚರ್ಚೆ ನಡೆಸಲಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.

ಎರಡು ದಿನಗಳ ಭೇಟಿಯಲ್ಲಿ ಸರ್ವಪಕ್ಷ ನಿಯೋಗದ ಸದಸ್ಯರು ಕಾಶ್ಮೀರದ ಸ್ಥಳೀಯ ಮುಖಂಡರನ್ನು ಭೇಟಿ ಮಾಡಲಿದ್ದು, ಚರ್ಚೆ ನಡೆಸಲಿದ್ದು, ಕಾಶ್ಮೀರದ ಪರಿಸ್ಥಿತಿಯನ್ನು ಅವಲೋಕಿಸಲಿದ್ದಾರೆ. ಇದೆ ವೇಳೆ ಸ್ಥಳೀಯ ಅಧಿಕಾರಿಗಳು ಕಾಶ್ಮೀರದಲ್ಲಿ ವಿಧಿಸಲಾಗಿದ್ದ ಕರ್ಫ್ಯೂವನ್ನು ಹಿಂಪಡೆದಿದ್ದಾರೆ. ಇನ್ನು ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಪ್ರತ್ಯೇಕತಾವಾದಿ ನಾಯಕರಿಗೆ ಪತ್ರ ಬರೆದಿದ್ದು, ನಿಯೋಗವನ್ನು ಭೇಟಿ ಮಾಡುವಂತೆ ಮನವಿ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com