ದೇಶ

ಕಾವೇರಿ ನೀರು ಬಿಡುವುದಿಲ್ಲ ಎಂದು ಘೋಷಿಸಿ, ಇಲ್ಲವೇ ಮರ್ಯಾದೆಯಿಂದ ರಾಜೀನಾಮೆ ನೀಡಿ: ಸಿಎಂಗೆ ಮಾಜಿ ಸಂಸದ ವಿಶ್ವನಾಥ್ ಆಗ್ರಹ

ತಮಿಳುನಾಡಿಗೆ ರಾತ್ರೋರಾತ್ರಿ ನೀರು ಹರಿಸಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮೈಸೂರು ಮಾಜಿ ಸಂಸದ ಹೆಚ್ ವಿಶ್ವನಾಥ್, ಕೂಡಲೇ ರಾಜೀನಾಮೆ ನೀಡುವಂತೆ ಆಗ್ರಹಿಸಿ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

ಕಾವೇರಿ ನೀರು ಬಿಡುವುದಿಲ್ಲ ಎಂದು ಘೋಷಿಸಿ, ಇಲ್ಲವೇ ಮರ್ಯಾದೆಯಿಂದ ರಾಜೀನಾಮೆ ನೀಡಿ: ಸಿಎಂಗೆ ಮಾಜಿ ಸಂಸದ ವಿಶ್ವನಾಥ್ ಆಗ್ರಹ
ವಿಶ್ವನಾಥ್
Published On :

ನವದೆಹಲಿ: ತಮಿಳುನಾಡಿಗೆ ರಾತ್ರೋರಾತ್ರಿ ನೀರು ಹರಿಸಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮೈಸೂರು ಮಾಜಿ ಸಂಸದ ಹೆಚ್ ವಿಶ್ವನಾಥ್, ಕೂಡಲೇ ರಾಜೀನಾಮೆ ನೀಡುವಂತೆ ಆಗ್ರಹಿಸಿ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

ಕಾವೇರಿ ನೀರನ್ನು ತಮಿಳುನಾಡುಗೆ ಬಿಡುವುದಿಲ್ಲ ಎಂದು ಘೋಷಣೆ ಮಾಡಿ, ಇಲ್ಲವೇ ಕೂಡಲೇ ಮರ್ಯಾದೆಯಿಂದ ರಾಜೀನಾಮೆ ನೀಡಿ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಬರೆದಿರುವ ಪತ್ರದಲ್ಲಿ ಮಾಜಿ ಸಂಸದ ಹೆಚ್ ವಿಶ್ವನಾಥ್ ಆಗ್ರಹಿಸಿದ್ದಾರೆ.

ಇನ್ನು ಜಲಸಂಪನ್ಮೂಲ ಸಚಿವ ಎಂಬಿ ಪಾಟೀಲ್ ಅವರ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಂಸದ ವಿಶ್ವನಾಥ್, ರಾಜ್ಯದಲ್ಲಿ ನೀರಿನ ಅಭಾವವಿದ್ದರೂ ತಮಿಳುನಾಡಿಗೆ ನೀರು ಬಿಡಲಾಗಿದೆ. ಜಲಸಂಪನ್ಮೂಲ  ಸಚಿವರೂ ಸಹ ರಾಜೀನಾಮೆ ನೀಡಲಿ, ಇಲ್ಲವೇ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುವುದಿಲ್ಲ ಎಂದು ಘೋಷಿಸಲಿ ಎಂದು ವಿಶ್ವನಾಥ್ ಪತ್ರದ ಮೂಲಕ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.