ಕಾವೇರಿ ವಿವಾದ: ಪ್ರಧಾನಿಯೊಂದಿಗೆ ಚರ್ಚೆ ನಡೆಸಲಿರುವ ಮಾಜಿ ಪ್ರಧಾನಿ ದೇವೇಗೌಡ

ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರಕ್ಕೆ ರಾಜ್ಯದಲ್ಲಿ ಪ್ರತಿಭಟನೆ ಭುಗಿಲೆದ್ದಿದ್ದು, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾಜಿ ಪ್ರಧಾನಿ ದೇವೇಗೌಡ
ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾಜಿ ಪ್ರಧಾನಿ ದೇವೇಗೌಡ
Updated on: 

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರಕ್ಕೆ ರಾಜ್ಯದಲ್ಲಿ ಪ್ರತಿಭಟನೆ ಭುಗಿಲೆದ್ದಿದ್ದು, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಭೇಟಿಗೆ ಈಗಾಗಲೇ ಸಮಯ ನಿಗದಿಯಾಗಿದ್ದು, ಸಮಸ್ಯೆ ಬಗೆಹರಿಸಲು ಮಧ್ಯಪ್ರವೇಶ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡುವುದು ಭೇಟಿಯ ಮುಖ್ಯ ಉದ್ದೇಶವಾಗಿದೆ. ಶುಕ್ರವಾರ ಸಂಜೆ 7 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಭೇಟಿಗೆ ಸಮಯ ನಿಗದಿಯಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೂ ಮುನ್ನ ಕಾವೇರಿ ವಿಷಯದ ಬಗ್ಗೆ ರಾಜ್ಯ ಸರ್ಕಾರದ ವಕೀಲರಾದ ಫಾಲಿ ನಾರಿಮನ್ ಹಾಗೂ ಅನಿಲ್ ದಿವಾನ್ ಅವರೊಂದಿಗೆ ದೇವೇಗೌಡ ಚರ್ಚೆ ನಡೆಸಲಿದ್ದಾರೆ. ಇದಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೇವೇಗೌಡರು ಚರ್ಚೆ ನಡೆಸಲಿದ್ದಾರೆ. ಇದಕ್ಕಾಗಿ ನಾಳೆ ದೆಹಲಿಗೆ ಮಾಜಿ ಪ್ರಧಾನಿ ದೇವೇಗೌಡ ಪ್ರಯಾಣಿಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com