ಕಾಶ್ಮೀರ ಹಿಂಸಾಚಾರ: ಸೇನಾ ಮುಖ್ಯಸ್ಥ'ರನ್ನು ಭೇಟಿಯಾಗಲಿರುವ ರಾಜನಾಥ್ ಸಿಂಗ್

ಕಣಿವೆಗಳ ರಾಜ್ಯ ಕಾಶ್ಮೀರದಲ್ಲಿ ಭುಗಿಲೆದ್ದಿರುವ ಹಿಂಸಾಚಾರ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಭಾರತೀಯ ಸೇನಾ ಮುಖ್ಯಸ್ಥ ದಲ್ಬೀರ್ ಸಿಂಗ್...
ಸೇನಾ ಮುಖ್ಯಸ್ಥ ದಲ್ಬೀರ್ ಸಿಂಗ್
ಸೇನಾ ಮುಖ್ಯಸ್ಥ ದಲ್ಬೀರ್ ಸಿಂಗ್

ನವದೆಹಲಿ: ಕಣಿವೆಗಳ ರಾಜ್ಯ ಕಾಶ್ಮೀರದಲ್ಲಿ ಭುಗಿಲೆದ್ದಿರುವ ಹಿಂಸಾಚಾರ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಭಾರತೀಯ ಸೇನಾ ಮುಖ್ಯಸ್ಥ ದಲ್ಬೀರ್ ಸಿಂಗ್ ಅವರನ್ನು ಬುಧವಾರ ಭೇಟಿಯಾಗಲಿದ್ದಾರೆಂದು ತಿಳಿದುಬಂದಿದೆ.

ಉಗ್ರ ಬುರ್ಹಾನ್ ವಾನಿ ಹತ್ಯೆ ಖಂಡಿಸಿ ಕಾಶ್ಮೀರದಲ್ಲಿ ನಿರ್ಮಾಣವಾಗಿರುವ ಹಿಂಸಾಚಾರ ಹಿನ್ನೆಲೆಯಲ್ಲಿ ಇಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ರಾಜಧಾನಿ ದೆಹಲಿಯಲ್ಲಿ ಸರ್ವಪಕ್ಷ ಸಭೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಕಾಶ್ಮೀರ ಪರಿಸ್ಥಿತಿ ಕುರಿತಂತೆ ಸಭೆ ನಡೆಸುವುದಕ್ಕೂ ಮುನ್ನ ರಾಜನಾಥ್ ಸಿಂಗ್ ಅವರು ಸೇನಾ ಮುಖ್ಯಸ್ಥರನ್ನು ಭೇಟಿಯಾಗಲಿದ್ದಾರೆಂದು ಹೇಳಲಾಗುತ್ತಿದೆ. ಭೇಟಿ ವೇಳೆ ಕೇಂದ್ರ ಗೃಹ ಕಾರ್ಯದರ್ಶಿ ರಾಜೀವ್ ಮೆಹ್ರಿಶಿ ಅವರು ಹಾಜರಿಲಿದ್ದಾರೆಂದು ತಿಳಿದುಬಂದಿದೆ.

ಕಾಶ್ಮೀರ ವಿವಾದ ಕುರಿತಂತೆ ಕೆಲ ದಿನಗಳ ಹಿಂದಷ್ಟೇ ರಾಜನಾಥ್ ಸಿಂಗ್ ನೇತೃದಲ್ಲಿ ಕಾಶ್ಮೀರದಲ್ಲಿ ಸರ್ವಪಕ್ಷ ಸಭೆಯೊಂದು ನಡೆದಿತ್ತು. ಎರಡು ದಿನಗಳ ಕಾಲ ಕಾಶ್ಮೀರಕ್ಕೆ ಭೇಟಿ ನೀಡಿದ್ದ ಗೃಹ ಸಚಿವರು ಪರಿಸ್ಥಿತಿಯನ್ನು ಅವಲೋಕಿಸಿದ್ದರು. ಪ್ರಧಾನಮಂತ್ರಿ ನರೇಂದ್ರ ಮೋದಿಯವರೂ ವಿಯೆಟ್ನಾಂ ಹಾಗೂ ಚೀನಾ ಪ್ರವಾಸ ಮುಗಿಸಿ ಸೋಮವಾರ ಸಂಜೆಯಷ್ಟೇ ದೆಹಲಿಗೆ ಬಂದಿದ್ದರು. ಇದರಂತೆ ನಿನ್ನೆ ರಾಜನಾಥ್ ಸಿಂಗ್ ಅವರು ಕಾಶ್ಮೀರ ಪರಿಸ್ಥಿತಿ ಕುರಿತಂತೆ ಪ್ರಧಾನಿಯವರಿಗೆ ವರದಿ ಸಲ್ಲಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com