ದೇಶ

ಉದ್ದಿಮೆದಾರರ ಜೇಬು ತುಂಬಲು ಮೋದಿ ಕಾರ್ಯನಿರತರಾಗಿದ್ದಾರೆ: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ "ಉದ್ದಿಮೆದಾರರ ಜೇಬು ತುಂಬಲು ಬ್ಯುಸಿಯಾಗಿದ್ದಾರೆ ಮತ್ತು ರೈತರ ಬಗ್ಗೆ ಅವರಿಗೆ ಕನಿಷ್ಠ ಕಾಳಜಿಯೂ ಇಲ್ಲ" ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಬುಧವಾರ

ಉದ್ದಿಮೆದಾರರ ಜೇಬು ತುಂಬಲು ಮೋದಿ ಕಾರ್ಯನಿರತರಾಗಿದ್ದಾರೆ: ರಾಹುಲ್ ಗಾಂಧಿ
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ
Published On :
ಗೋರಕ್ ಪುರ: ಪ್ರಧಾನಿ ನರೇಂದ್ರ ಮೋದಿ "ಉದ್ದಿಮೆದಾರರ ಜೇಬು ತುಂಬಲು ಬ್ಯುಸಿಯಾಗಿದ್ದಾರೆ ಮತ್ತು ರೈತರ ಬಗ್ಗೆ ಅವರಿಗೆ ಕನಿಷ್ಠ ಕಾಳಜಿಯೂ ಇಲ್ಲ" ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಬುಧವಾರ ಹೇಳಿದ್ದಾರೆ. 
ಗೋರಕ್ ಪುರ ವೈದ್ಯಕೀಯ ಕಾಲೇಜಿನಲ್ಲಿ ಜಪಾನೀಸ್ ಎನ್ಸೆಫಲೈಟಿಸ್ ರೋಗದಿಂದ ನರಳುತ್ತಿರುವ ರೋಗಿಗಳ ಆರೋಗ್ಯ ವಿಚಾರಿಸಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಕಾಂಗ್ರೆಸ್ ಮುಖಂಡ, ಈ ರೋಗವನ್ನು ತಡೆಗಟ್ಟಲು ಮೋದಿ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಮತ್ತು ಇದೀಗ ತೀವ್ರ ಖಾಯಿಲೆಯಾಗಿ ಪರಿಣಮಿಸಿದೆ ಎಂದಿದ್ದಾರೆ. 
ಉತ್ತರ ಪ್ರದೇಶದಲ್ಲಿ 2500 ಕಿಲೋಮೀಟರ್ ಗಳ 'ಕಿಸಾನ್ ಮಹಾಯಾತ್ರ'ದ ಎರಡನೇ ದಿನವಾದ ಇಂದು ರಾಹುಲ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. 
ಗೋರಕ್ ಪುರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜಪಾನೀಸ್ ಎನ್ಸೆಫಲೈಟಿಸ್ ರೋಗವನ್ನು ಹತ್ತಿಕ್ಕಲು ಯುಪಿಎ ಸರ್ಕಾರ ಗರಿಷ್ಠ ಮಟ್ಟದ ಅನುದಾನ ನೀಡಿತ್ತು ಎಂದು ಕೂಡ ಅವರು ಹೇಳಿದ್ದಾರೆ. 
ಅವರ ಮುಂದುವರೆದ ಪಾದಯಾತ್ರೆಯಲ್ಲಿ ರಾಹುಲ್ ಗಾಂಧಿ ದಲಿತರ ಕೇರಿಗೆ ಹೋಗಿ ಅಲ್ಲಿನ ನಿವಾಸಿಗಳನ್ನು ಭೇಟಿ ಮಾಡಿ, ಅಲ್ಲಿ ಔತಣ ಸವಿಯುವ ಯೋಜನೆಯನ್ನು ಹಮ್ಮಿಕೊಂಡಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.