
ನವದೆಹಲಿ: ಮುಂದಿನ ವರ್ಷದ ಏಪ್ರಿಲ್ 1 ಕ್ಕೆ ಜಿಎಸ್ ಟಿ ಕಾಯ್ದೆಯನ್ನು ದೇಶಾದ್ಯಂತ ಜಾರಿಗೆ ತರುವ ಗುರಿಯನ್ನು ತಲುಪಲಾಗುವುದು ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ನವದೆಹಲಿಯಲ್ಲಿ ನಡೆದ ಎಕಾನಾಮಿಸ್ಟ್ ಇಂಡಿಯಾ ಸಮ್ಮೇಳನದಲ್ಲಿ ಮಾತನಾಡಿರುವ ಅರುಣ್ ಜೇಟ್ಲಿ, ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಸುಧಾರಣೆ ತರುವ ಭಾಗವಾಗಿ ಕೆಲವು ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಗಳನ್ನು ವಿಲೀನಗೊಳಿಸಲಾಗುತ್ತಿದೆಯಾದರೂ, ಬ್ಯಾಂಕ್ ಗಳನ್ನು ಖಾಸಗೀಕರಣಗೊಳಿಸುವ ಉದ್ದೇಶವಿಲ್ಲ ಎಂದು ಅರುಣ್ ಜೇಟ್ಲಿ ಸ್ಪಷ್ಟಪಡಿಸಿದ್ದಾರೆ.
"ಬ್ಯಾಂಕಿಂಗ್ ವ್ಯವಸ್ಥೆಯನ್ನು ಖಾಸಗೀಕರಣಗೊಳಿಸುವ ಪ್ರಸ್ತಾವನೆ ಇಲ್ಲ, ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಗಳ ಅಭಿವೃದ್ಧಿ ಸರ್ಕಾರದ ಮೊದಲನೇ ಆದ್ಯತೆಯಾಗಿದೆ ಎಂದು ಜೇಟ್ಲಿ ತಿಳಿಸಿದ್ದಾರೆ. ಇದೆ ವೇಳೆ ಜಿಎಸ್ ಟಿ ಕಾಯ್ದೆ ಜಾರಿ ಕುರಿತು ಮಾತನಾಡಿರುವ ಜೇಟ್ಲಿ, ಜಿಎಸ್ ಟಿ ಕಾಯ್ದೆ ಜಾರಿಗೆ ಸಮಯದ ಅಭಾವವಿದೆ. ಆದರೂ ಶೀಘ್ರವೇ ಜಿಎಸ್ ಟಿ ಮಸೂದೆಯನ್ನು ಜಾರಿಗೊಳಿಸುತ್ತೇವೆ ಎಂದು ಹೇಳಿದ್ದಾರೆ.
Advertisement