ಸರ್ವಪಕ್ಷ ಸಭೆ: ಕಾಶ್ಮೀರ ಪರಿಸ್ಥಿತಿ ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ವಿಫಲ: ಸಂಸದರ ಹೇಳಿಕೆ

ಕಾಶ್ಮೀರ ಹಿಂಸಾಚಾರ ಕುರಿತಂತೆ ರಾಜಧಾನಿ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರ ನೇತೃತ್ವದಲ್ಲಿ ಸರ್ವಪಕ್ಷ ಸಭೆ ಬುಧವಾರ ಆರಂಭವಾಗಿದ್ದು...
ಗೃಹ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಭಾನುವಾರ ಕಾಶ್ಮೀರದಲ್ಲಿ ನಡೆದ ಸರ್ವಪಕ್ಷ ಸಭೆ
ಗೃಹ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಭಾನುವಾರ ಕಾಶ್ಮೀರದಲ್ಲಿ ನಡೆದ ಸರ್ವಪಕ್ಷ ಸಭೆ

ನವದೆಹಲಿ: ಕಾಶ್ಮೀರ ಹಿಂಸಾಚಾರ ಕುರಿತಂತೆ ರಾಜಧಾನಿ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರ ನೇತೃತ್ವದಲ್ಲಿ ಸರ್ವಪಕ್ಷ ಸಭೆ ಬುಧವಾರ ಆರಂಭವಾಗಿದ್ದು, ನಾಯಕರು ಚರ್ಚೆ ಆರಂಭಿಸಿದ್ದಾರೆ.

ಸಭೆ ಆರಂಭವಾಗುತ್ತಿದ್ದಂತೆ ಮಾತನಾಡಿದ ಗೃಹ ಸಚಿವ ರಾಜನಾಥ್ ಸಿಂಗ್ ಅವರು, ಕಾಶ್ಮೀರದಲ್ಲಿ ಉದ್ಭವಿಸಿರುವ ಹಿಂಸಾಚಾರ ವಿಚಾರವನ್ನು ಪ್ರಸ್ತಾಪ ಮಾಡಿದರು. ನಂತರ ಚರ್ಚೆ ಮಾಡಲು ಆರಂಭಿಸಿದ ನಾಯಕರು, ಕಾಶ್ಮೀರದಲ್ಲಿ ಉಂಟಾಗಿರುವ ಹಿಂಸಾಚಾರ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಹೇಳಿದರು.

ಕಾಶ್ಮೀರದ ಹಿಂಸಾಚಾರದ ಹಿಂದೆ ಪಾಕಿಸ್ತಾನದ ನೇರ ಕೈವಾಡವಿದ್ದು, ಪ್ರತ್ಯೇಕತಾವಾದಿಗಳ ಹೆಸರಿನಲ್ಲಿ ಪಾಕಿಸ್ತಾನ ಕಾಶ್ಮೀರದಲ್ಲಿ ಪ್ರತಿಭಟನೆ ನಡೆಸುತ್ತಿದೆ. ಕಾಶ್ಮೀರದಲ್ಲಿ ಹಿಂಸಾಚಾರ ಆರಂಭವಾಗಿ ಹಲವು ದಿನಗಳು ಕಳೆದರೂ ಪರಿಸ್ಥಿತಿ ನಿಭಾಯಿಸುವಲ್ಲಿ ಅಲ್ಲಿನ ಸರ್ಕಾರ ವಿಫಲವಾಗಿದೆ. ಪರಿಸ್ಥಿತಿ ನಿಭಾಯಿಸುವ ಬದಲು ಅಲ್ಲಿ ರಾಜಕೀಯ ನಾಯಕರು ದಿಕ್ಕು ತಪ್ಪಿಸುವ ಹೇಳಿಕೆಗಳನ್ನು ನೀಡುತ್ತಿದ್ದಾರೆ.

ಹಿಂಸಾಚಾರವನ್ನು ಹತ್ತಿಕ್ಕಬೇಕಾದರೆ ಮೊದಲು ಜನರ ಮೇಲೆ ಅಲ್ಲಿನ ಸರ್ಕಾರ ನಿಯಂತ್ರಣ ಸಾಧಿಸಬೇಕಿದೆ. ರಸ್ತೆಗಿಳಿಯುವ ಜನರು ಕಾನೂನು ಮತ್ತು ಸುವ್ಯವಸ್ಥೆಯನ್ನು ಹಾಳು ಮಾಡುತ್ತಿದ್ದಾರೆ. ಇಂತಹವರಿಂದಲೇ ಕಾಶ್ಮೀರದಲ್ಲಿ ಹಿಂಸಾಚಾರ ಇಂದಿಗೂ ಮುಂದುವರೆಯಲು ಕಾರಣವಾಗುತ್ತಿದೆ.

ಕಾಶ್ಮೀರದಲ್ಲಿ ಕರ್ಫ್ಯೂವನ್ನು ತೆರವುಗೊಳಿಸಬೇಕಾದ ಅಗತ್ಯವಿದ್ದು, ಶಾಲಾ-ಕಾಲೇಜುಗಳು ಆರಂಭವಾಗುವಂತೆ ಮಾಡಬೇಕು. ಜನರು ಎಂದಿನಂತೆ ಭಯಬಿಟ್ಟು ಜೀವನ ನಡೆಸುವಂತೆ ಮಾಡಬೇಕಿದೆ. ನಾಗರೀಕರ ಮೇಲೆ ನಿಯಮವನ್ನು ಹೇರಬಾರದು. ಹಿಂಸಾಚಾರದಲ್ಲಿ ಸಾವನ್ನಪ್ಪಿದ್ದವರಿಗೆ ಸರ್ಕಾರ ಪರಿಹಾರ ನೀಡಬೇಕಿದೆ. ಕಾಶ್ಮೀರದಲ್ಲಿ ಬಳಕೆ ಮಾಡುತ್ತಿರುವ ಪೆಲೆಟ್ ಗನ್ ಗಳ ಬಳಕೆಯನ್ನು ನಿಲ್ಲಿಸಬೇಕು ಎಂದು ಸಂಸದರು ಸಭೆಯಲ್ಲಿ ಹೇಳಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com