'ಬಂದ್'ಳೂರು ಟ್ವೀಟ್‌ಗೆ ವ್ಯಾಪಕ ಟೀಕೆ, ಟ್ವೀಟ್ ಡಿಲೀಟ್ ಮಾಡಿದ ಕಿರಣ್ ಮಜುಂದಾರ್

ಬಯೋಕಾನ್ ಕಂಪನಿಯ ಮುಖ್ಯಸ್ಥೆ ಕಿರಣ್ ಮಜುಂದಾರ್ ಷಾ ಅವರ 'ಬಂದ್'ಳೂರು ಟ್ವೀಟ್ ಗೆ ನೆಗೆಟಿವ್ ರಿ-ಟ್ವೀಟ್ ಬಂದಿದ್ದರಿಂದ ತಮ್ಮ ಟ್ವೀಟ್ ಅನ್ನು ಡಿಲೀಟ್...

ಬೆಂಗಳೂರು: ಬಯೋಕಾನ್ ಕಂಪನಿಯ ಮುಖ್ಯಸ್ಥೆ ಕಿರಣ್ ಮಜುಂದಾರ್ ಷಾ ಅವರ 'ಬಂದ್'ಳೂರು ಟ್ವೀಟ್ ಗೆ ನೆಗೆಟಿವ್ ರಿ-ಟ್ವೀಟ್ ಬಂದಿದ್ದರಿಂದ ತಮ್ಮ ಟ್ವೀಟ್ ಅನ್ನು ಡಿಲೀಟ್ ಮಾಡಿದ್ದಾರೆ.

ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಬೆಂಗಳೂರು ಸಹ ಸಂಪೂರ್ಣ ಬಂದ್ ಆಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಬದಲಿಗೆ 'ಬಂದ್'ಳೂರು ಎಂದು ಟ್ವೀಟ್ ಮಾಡಿದ್ದರು. ಈ ಟ್ವೀಟ್ ಗೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದರಿಂದ ಆ ಟ್ವೀಟ್ ಅನ್ನು ಡಿಲೀಟ್ ಮಾಡಿ ಹೊಸದೊಂದು ಟ್ವೀಟ್ ಮಾಡಿದ್ದಾರೆ.

ಕಿರಣ್ ಮಜುಂದಾರ್ ತಮ್ಮ ಹೊಸ ಟ್ವೀಟ್ ನಲ್ಲಿ ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಬಾರದು. ಎರಡೂ ರಾಜ್ಯಗಳ ಸರ್ಕಾರಗಳು ಈ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳುವ ವಿಶ್ವಾಸವಿದೆ ಎಂದು ಟ್ವೀಟಿಸಿದ್ದಾರೆ.

ಬೆಂಗಳೂರನ್ನು "ಬಂದಳೂರು" ಎಂದು ವ್ಯಂಗ್ಯ ಮಾಡಿದ್ದಾರೆ. "ಮತ್ತೊಂದು ಬಂದ್... ಬೆಂಗಳೂರು ಬಂದಳೂರಾಗಿ ಬದಲಾಗುತ್ತಿದೆ. ಪದೇ ಪದೇ ಬಂದ್ ಮಾಡುವ ಮೂಲಕ ಉತ್ಪಾದನಾ ಕ್ಷೇತ್ರದ ಮೆಲೆ ಗಂಭೀರ ಪರಿಣಾಮ ಬೀರುತ್ತದೆ ಎಂದು ಕಿರಣ್ ಮಜುಂದಾರ್ ಟ್ವೀಟ್ ಮಾಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com