ವಿವಾಹವನ್ನು ಅನುಸರಿಸಿ ನಡೆಯಬೇಕಿದ್ದ ಲೈಂಗಿಕ ಸಂಬಂಧವು ಸಂಪನ್ನವಾಗಿಲ್ಲ ಎಂದು 2011ರಲ್ಲಿ ವಿವಾಹ ವಿಚ್ಛೇದನ ಕೋರಿ ಅರ್ಜಿದಾರನೊಬ್ಬ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಅರ್ಜಿದಾರನ ದೂರನ್ನು ಖಚಿತ ಪಡಿಸಿಕೊಳ್ಳುವ ಸಲುವಾಗಿ ಮುಂಬೈನ ಕೌಟುಂಬಿಕ ನ್ಯಾಯಾಲಯವು ಈ ಪ್ರಕರಣದಲ್ಲಿ ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಗುರಿಪಡಿಸುವ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಮಹಿಳೆ ಬಾಂಬೆ ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದಳು.