ಕಾಶ್ಮೀರ ಹಿಂಸಾಚಾರಕ್ಕೆ ಪಾಕ್ ನಿಂದ ಆರ್ಥಿಕ ನೆರವು: ಪರಿಶೀಲನೆ ನಡೆಸುವುದಾಗಿ ಕಿರಣ್ ರಿಜಿಜು ಹೇಳಿಕೆ

ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಪಾಕಿಸ್ತಾನ ಮೂಲದ ಉಗ್ರ ಸಂಘಟನೆಯಿಂದ ಆರ್ಥಿಕ ನೆರವು ನೀಡುತ್ತಿರುವುದಾಗಿ ಹೇಳಲಾಗುತ್ತಿದ್ದು, ಈ ಕುರಿತಂತೆ ಕಟ್ಟುನಿಟ್ಟಿನ ಪರಿಶೀಲನೆ ನಡೆಸುವುದಾಗಿ...
ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು
ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು

ನವದೆಹಲಿ: ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಪಾಕಿಸ್ತಾನ ಮೂಲದ ಉಗ್ರ ಸಂಘಟನೆಯಿಂದ ಆರ್ಥಿಕ ನೆರವು ನೀಡುತ್ತಿರುವುದಾಗಿ ಹೇಳಲಾಗುತ್ತಿದ್ದು, ಈ ಕುರಿತಂತೆ ಕಟ್ಟುನಿಟ್ಟಿನ ಪರಿಶೀಲನೆ ನಡೆಸುವುದಾಗಿ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ಅವರು ಭಾನುವಾರ ಹೇಳಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಅವರು, ಕಾಶ್ಮೀರ ಹಿಂಸಾಚಾರಕ್ಕೆ ಪಾಕ್ ಮೂಲದಿಂದ ಆರ್ಥಿಕ ನೆರವು ಪೂರೈಕೆಯಾಗುತ್ತಿರುವುದಾಗಿ ಹೇಳಲಾಗುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಕಟ್ಟುನಿಟ್ಟಿನ ಪರಿಶೀಲನೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.

ಗಡಿಯಲ್ಲಿ ನಡೆಯುತ್ತಿರುವ ದೇಶ ವಿರೋಧಿ ಚಟುವಟಿಕೆ ಕುರಿತಂತೆ ಗುಪ್ತಚರ ಇಲಾಖೆ ವಿದೇಶಾಂಗ ಸಚಿವಾಲಯಕ್ಕೆ ವರದಿಯೊಂದನ್ನು ಸಲ್ಲಿಸಿತ್ತು. ವರದಿಯಲ್ಲಿ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆ ಮುಖ್ಯಸ್ಥ ಹಫೀಜ್ ಸಯೀದ್ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಸಯೀದ್ ಸಲಹುದ್ದೀನ್ ಪಾಕಿಸ್ತಾನದಲ್ಲಿ ಡೊನೇಷನ್ ಗಳನ್ನು ಸಂಗ್ರಹಿಸುತ್ತಿದ್ದು, ಈ ಹಣವನ್ನು ಕಾಶ್ಮೀರದಲ್ಲಿ ಹಿಂಸಾಚಾರ ಸೃಷ್ಟಿಸಲು ಬಳಸಿಕೊಳ್ಳಲಾಗುತ್ತಿದೆ ಎಂದು ಹೇಳಿದೆ.

ಅಲ್ಲದೆ, ಕೆಲ ಉಗ್ರ ಸಂಘಟನೆಗಳು ಜಮ್ಮು ಮತ್ತು ಕಾಶ್ಮೀರ, ಹರಿಯಾಣ, ದೆಹಲಿ ಮತ್ತು ರಾಜಸ್ಥಾನದಲ್ಲಿರುವ ಸೇನಾ ನೆಲೆಗಳ ಮೇಲೆ ದಾಳಿ ನಡೆಸಲು ಯೋಜನೆ ರೂಪಿಸಿದೆ ಎಂದು ಹೇಳಿದೆ. ಗುಪ್ತಚರ ಇಲಾಕೆ ಮಾಹಿತಿ ನೀಡಿರುವ ಹಿನ್ನೆಲೆಯಲ್ಲಿ ವಿದೇಶಾಂಗ ಸಚಿವಾಲಯ ದೇಶದಾದ್ಯಂತ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಿದೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com