ಕಾಶ್ಮೀರದಲ್ಲಿ ಅಶಾಂತಿ ಸೃಷ್ಟಿಗೆ ಪಾಕಿಸ್ತಾನ ಕಾರಣ: ಉಪ ಮುಖ್ಯಮಂತ್ರಿ ನಿರ್ಮಲ್ ಸಿಂಗ್

ನರಕ ಪೀಡಿತ ಇಸ್ಲಾಮಾಬಾದ್ ಕಾಶ್ಮೀರದಲ್ಲಿ ಅಶಾಂತಿ ಸೃಷ್ಟಿಸುತ್ತಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಉಪ ಮುಖ್ಯಮಂತ್ರಿ ನಿರ್ಮಲ್ ಸಿಂಗ್ ಅವರು ಭಾನುವಾರ...
ಉಪ ಮುಖ್ಯಮಂತ್ರಿ ನಿರ್ಮಲ್ ಸಿಂಗ್
ಉಪ ಮುಖ್ಯಮಂತ್ರಿ ನಿರ್ಮಲ್ ಸಿಂಗ್

ಜಮ್ಮು: ನರಕ ಪೀಡಿತ ಇಸ್ಲಾಮಾಬಾದ್ ಕಾಶ್ಮೀರದಲ್ಲಿ ಅಶಾಂತಿ ಸೃಷ್ಟಿಸುತ್ತಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಉಪ ಮುಖ್ಯಮಂತ್ರಿ ನಿರ್ಮಲ್ ಸಿಂಗ್ ಅವರು ಭಾನುವಾರ ಹೇಳಿದ್ದಾರೆ.

ಕಾಶ್ಮೀರದ ಹಂದ್ವಾರದಲ್ಲಿ ನಡೆಯುತ್ತಿರುವ ಉಗ್ರ ದಾಳಿ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಉಗ್ರ ದಾಳಿ ಹಿಂದೆ ಪಾಕಿಸ್ತಾನದ ಕೈವಾಡವಿದ್ದು, ಪಾಕಿಸ್ತಾನದ ಈ ರೀತಿಯ ವರ್ತನೆಯನ್ನು ಖಂಡಿಸುತ್ತೇವೆ. ನರಕ ಪೀಡಿತ ಇಸ್ಲಾಮಾಬಾದ್ ಇಂದು ಕಾಶ್ಮೀರದಲ್ಲಿ ಅಶಾಂತಿಯನ್ನು ಸೃಷ್ಟಿಸುತ್ತಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂಸಾಚಾರ ಸೃಷ್ಟಿಸಲು ಪಾಕಿಸ್ತಾನ ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ. ಈ ಪ್ರಯತ್ನದಲ್ಲಿ ಮುಗ್ಧ ಜನರು ಬಲಿಯಾಗುತ್ತಿದ್ದಾರೆಂದು ಹೇಳಿದ್ದಾರೆ.

ಪೂಂಚ್ ನಡೆಯುತ್ತಿರುವ ಎನ್ ಕೌಂಟರ್ ನಲ್ಲಿ ಓರ್ವ ಪೊಲೀಸ್ ಸಾವನ್ನಪ್ಪಿ, ಮತ್ತೊರ್ವನಿಗೆ ಗಂಭೀರವಾಗಿ ಗಾಯವಾಗಿದೆ. ಪ್ರಸ್ತುತ ಎನ್ ಕೌಂಟರ್ ಪ್ರಗತಿಯಲ್ಲಿದೆ. ಮತ್ತಷ್ಟು ಮಾಹಿತಿಗಾಗಿ ಎದುರು ನೋಡಲಾಗುತ್ತಿದೆ. ಉಗ್ರರು ದಾಳಿ ನಡೆಸಿರುವ ಪ್ರದೇಶದ ಸುತ್ತಲೂ ಭದ್ರತೆಯನ್ನು ನಿಯೋಜಿಸಲಾಗಿದ್ದು, ಕಟ್ಟಡದಲ್ಲಿ ಯೋಧರು ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com