

ನವದೆಹಲಿ: ತಮಿಳುನಾಡಿಗೆ 1.50 ಲಕ್ಷ ಕ್ಯೂಸೆಕ್ಸ್ ಕಾವೇರಿ ನೀರು ಹರಿಸಲು ನೀಡಿದ್ದ ಆದೇಶದ ಮಾರ್ಪಾಡಿಗೆ ಮನವಿ ಮಾಡಿ ಸಲ್ಲಿಸಿದ್ದ ಕರ್ನಾಟಕದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ಸೂಚಿಸಿದೆ.
ಸೆ.12 ರಂದು ಬೆಳಿಗ್ಗೆ 10:30 ಕ್ಕೆ ಸುಪ್ರೀಂ ಕೋರ್ಟ್ ನ ನ್ಯಾ. ದೀಪಕ್ ಮಿಶ್ರಾ ಹಾಗೂ ನ್ಯಾ.ಯು.ಯು. ಲಲಿತ್ ಅವರ ವಿಭಾಗೀಯ ಪೀಠ ಕರ್ನಾಟಕದ ಅರ್ಜಿ ವಿಚಾರಣೆ ನಡೆಸಲಿದೆ. ತಮಿಳು ನಾಡಿಗೆ 15 ಸಾವಿರ ಕ್ಯೂಸೆಕ್ ನೀರು ಹರಿಸಬೇಕೆಂದು ಸೆಪ್ಟೆಂಬರ್ 5ರಂದು ಸುಪ್ರೀಂ ಕೋರ್ಟ್ ನೀಡಿರುವ ಆದೇಶಕ್ಕೆ ಮಾರ್ಪಾಡು ಮಾಡಬೇಕೆಂದು ಕೋರಿ ಕರ್ನಾಟಕ ಸರ್ಕಾರ ಅರ್ಜಿ ಹಾಕಿತ್ತು.
ಕೋರ್ಟ್ ನ ಆದೇಶದಂತೆ ತಮಿಳು ನಾಡಿಗೆ ಈಗಾಗಲೇ 66 ಸಾವಿರ ಕ್ಯೂಸೆಕ್ ನೀರು ಹರಿಸಿದ್ದೇವೆ. ಇನ್ನು ಬಿಡುಗಡೆ ಮಾಡಲು ನಮ್ಮ ಜಲಾಶಯದಲ್ಲಿ ನೀರಿಲ್ಲ. ಹಾಗಾಗಿ ಆದೇಶಕ್ಕೆ ಮಾರ್ಪಾಡು ತರಬೇಕೆಂದು ಅರ್ಜಿಯಲ್ಲಿ ಕೋರಲಾಗಿದೆ.