ರಾಜ್ಯಕ್ಕೆ ಹೆಚ್ಚುವರಿ ಸೇನೆ ರವಾನಿಸುವಂತೆ ರಾಜನಾಥ್ ಸಿಂಗ್‌ಗೆ ಸಿದ್ದು ಮನವಿ

ಕಾವೇರಿ ವಿಚಾರವಾಗಿ ರಾಜ್ಯದಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು ರಾಜ್ಯಕ್ಕೆ ಸೇನೆಯನ್ನು ರವಾನಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಗೃಹ...
Updated on: 
ಬೆಂಗಳೂರು: ಕಾವೇರಿ ವಿಚಾರವಾಗಿ ರಾಜ್ಯದಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು ರಾಜ್ಯಕ್ಕೆ ಸೇನೆಯನ್ನು ರವಾನಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ಮಾಡಿದ್ದಾರೆ. 
ರಾಜ್ಯದಲ್ಲಿ ಭುಗಿಲೆದ್ದಿರುವ ಹಿಂಸಾಚಾರವನ್ನು ಹತ್ತಿಕ್ಕಲು ಪೊಲೀಸರಿಂದ ಸಾಧ್ಯವಾಗದ ಕಾರಣ ಹೆಚ್ಚಿನ ಸೇನಾ ತುಕಡಿಗಳನ್ನು ರಾಜ್ಯಕ್ಕೆ ರವಾನಿಸುವಂತೆ ಮನವಿ ಮಾಡಿದ್ದಾರೆ. 
ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ಹಲ್ಲೆ ಮತ್ತು ಕರ್ನಾಟಕದ ಅಂಗಡಿ-ಹೊಟೇಲ್ ಗಳ ಮೇಲೆ ದಾಳಿ ನಡೆಸಿದ್ದರಿಂದ ರಾಜ್ಯದಲ್ಲಿ ಪ್ರತಿಭಟನೆಗಳು ನಡೆಸಲಾಗಿತ್ತು. ಈ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿದ್ದು ಬೆಂಗಳೂರು ಅಕ್ಷರಶಃ ಕಾದ ಹೊಲೆಯಂತಾಗಿದೆ.
ಇನ್ನಷ್ಟು ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುವಂತೆ ಸುಪ್ರೀಂಕೋರ್ಟ್ ಆದೇಶ ಹೊರಬರುತ್ತಿದ್ದಂತೆ ಬೀದಿಗಿಳಿದ ಪ್ರತಿಭಟನಾಕಾರರು ತಮಿಳುನಾಡಿನ ನೋಂದಣಿಯ ವಾಹನಗಳಿಗೆ ಕಲ್ಲು ತೂರಿದರು. ನಂತರ ವಾಹನಗಳಿಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶವನ್ನು ಹೊರಹಾಕಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com