ಜಾಕಿರ್ ನಾಯ್ಕ್ ಎನ್ ಜಿಒ ದೊಂದಿಗಿನ ನಂಟನ್ನು ಕಾಂಗ್ರೆಸ್ ಸ್ಪಷ್ಟಪಡಿಸಬೇಕು: ಬಿಜೆಪಿ

ಭಯೋತ್ಪಾದಕರಿಗೆ ಸ್ಫೂರ್ತಿಯಾಗುವ ಮೂಲಕ ಸುದ್ದಿಯಾಗಿದ್ದ ಇಸ್ಲಾಮ್ ಧರ್ಮ ಪ್ರಚಾರಕ ಜಾಕಿರ್ ನಾಯ್ಕ್ ರಾಜೀವ್ ಗಾಂಧಿ ಫೌಂಡೇಶನ್ ಗೆ ನೀಡಿದ್ದ ದೇಣಿಗೆ ವಿಷಯವಾಗಿ ಬಿಜೆಪಿ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಿದೆ.
ಬಿಜೆಪಿ
ಬಿಜೆಪಿ

ನವದೆಹಲಿ: ಭಯೋತ್ಪಾದಕರಿಗೆ ಸ್ಫೂರ್ತಿಯಾಗುವ ಮೂಲಕ ಸುದ್ದಿಯಾಗಿದ್ದ ಇಸ್ಲಾಮ್ ಧರ್ಮ ಪ್ರಚಾರಕ ಜಾಕಿರ್ ನಾಯ್ಕ್ ರಾಜೀವ್ ಗಾಂಧಿ ಫೌಂಡೇಶನ್ ಗೆ ನೀಡಿದ್ದ ದೇಣಿಗೆ ವಿಷಯವಾಗಿ ಬಿಜೆಪಿ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಿದೆ.

ನವದೆಹಲಿಯಲ್ಲಿ ಪ್ರತಿಭಟನೆ ನಡೆಸಿರುವ ಬಿಜೆಪಿ ಯುವ ಮೋರ್ಚಾ, ಕಾಂಗ್ರೆಸ್ ಪಕ್ಷ ಜಾಕಿರ್ ನಾಯ್ಕ್ ನ ಎನ್ ಜಿಒ ಇಸ್ಲಾಮಿಕ್ ರಿಸರ್ಚ್ ಫೌಂಡೇಶನ್ ನೊಂದಿಗೆ ಅದು ಹೊಂದಿರುವ ನಂಟಿನ ಬಗ್ಗೆ ಮಾಹಿತಿ ನೀಡಬೇಕು ಎಂದು ಆಗ್ರಹಿಸಿದೆ.

ರಾಜೀವ್ ಗಾಂಧಿ ಫೌಂಡೇಶನ್ ಕಚೇರಿ ಎದುರು ಪ್ರತಿಭಟನೆ ನಡೆಸಿರುವ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು, ಉಗ್ರರಿಗೆ ಸ್ಫೂರ್ತಿ ನೀಡುವ ರೀತಿಯಲ್ಲಿ ಭಾಷಣ ಮಾಡಿರುವ ವಿವಾದದಲ್ಲಿ ಸಿಲುಕಿರುವ ಜಾಕಿರ್ ನಾಯ್ಕ್ ನ ಎನ್ ಜಿಒ ನಿಂದ 50 ಲಕ್ಷ ರೂ ದೇಣಿಗೆ ಪಡೆದಿರುವುದನ್ನು ಖಂಡಿಸಿದ್ದಾರೆ. ಪ್ರತಿಭಟನಾ ನಿರತರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದು ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ರಾಜೀವ್ ಗಾಂಧಿ ಫೌಂಡೇಶನ್ ಜಾಕಿರ್ ನಾಯ್ಕ್ ನಿಂದ ಪಡೆದಿರುವ ದೇಣಿಗೆಯನ್ನು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಲಂಚ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com