ಕಾಶ್ಮೀರ ಹಿಂಸಾಚಾರ: ಶಾಂತಿ ಕಾಪಾಡಲು ಸೇನೆಗೆ ವಾರದ ಗಡುವು ನೀಡಿದ ಗೃಹ ಸಚಿವ

ವಾರದೊಳಗಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಶಾಂತಿ ಮರುಕಳಿಸುವಂತೆ ಮಾಡಿ ಎಂದು ಭಾರತೀಯ ಸೇನೆಗೆ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಸೋಮವಾರ...
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್

ಜಮ್ಮು: ವಾರದೊಳಗಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಶಾಂತಿ ಮರುಕಳಿಸುವಂತೆ ಮಾಡಿ ಎಂದು ಭಾರತೀಯ ಸೇನೆಗೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಸೋಮವಾರ ಸೂಚನೆ ನೀಡಿದ್ದಾರೆ.

ಕಾಶ್ಮೀರ ಹಿಂಸಾಚಾರ ಕುರಿತಂತೆ ಇಂದು ತಮ್ಮ ನಿವಾಸದಲ್ಲಿ ಉನ್ನತಾಧಿಕಾರಿಗಳೊಂದಿಗೆ ಸುಧೀರ್ಘ ಚರ್ಚೆ ನಡೆಸಿರುವ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಶಾಂತಿ ಮರುಕಳಿಸುವಂತೆ ಮಾಡಿ ಎಂದು ಭದ್ರತಾ ಸಿಬ್ಬಂದಿಗಳಿಗೆ ವಾರದ ಗಡುವು ನೀಡಿದ್ದಾರೆ.

ಸಭೆಯಲ್ಲಿ ಮಾತನಾಡಿರುವ ಅವರು, ಉಗ್ರ ಬುರ್ಹಾನ್ ವಾನಿ ಹತ್ಯೆ ಖಂಡಿಸಿ ಕಾಶ್ಮೀರದಲ್ಲಿ ಕಳೆದ 65 ದಿನಗಳಿಂದಲೂ ಹಿಂಸಾಚಾರ ನಡೆಯುತ್ತಿದೆ. ಹೀಗಾಗಿ ಭದ್ರತಾ ಸಿಬ್ಬಂದಿಗಳು ಹಿಂಸಾಚಾರ ಆರಂಭವಾಗುವುದಕ್ಕೂ ಮುನ್ನ ಎಚ್ಚರ ವಹಿಸಬೇಕಿದೆ. ಹಿಂಸಾಚಾರ ಆರಂಭಿಸಿ ಜನರ ಶಾಂತಿಗೆ ಧಕ್ಕೆಯುಂಟು ಮಾಡುವ ಜನರ ವಿರುದ್ಧ ಕೂಡಲೇ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.

ಹಿಂಸಾಚಾರ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಇನ್ನೊಂದು ವಾರದಲ್ಲಿ ಕಾಶ್ಮೀರದಲ್ಲಿ ಶಾಂತಿಯುತ ವಾತಾವರಣವನ್ನು ನಿರ್ಮಾಣ ಮಾಡಲಾಗುತ್ತದೆ. ಶೈಕ್ಷಣಿಕ ಸಂಸ್ಥೆಗಳಲ್ಲೂ ಶೀಘ್ರದಲ್ಲಿಯೇ ಶಾಂತಿ ನೆಲೆಯೂರುವಂತೆ ಮಾಡಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ.

ಅಲ್ಲದೆ, ಕಾಶ್ಮೀರದಲ್ಲಿ ಮತ್ತೆ ಅಂಗಡಿ ಮುಗ್ಗಟ್ಟುಗಳು ಹಾಗೂ ವ್ಯಾವಹಾರಿಕ ಚಟುವಟಿಕೆಗಳು ಆರಂಭವಾಗುವಂತೆ ಸೇನೆ ಮಾಡಬೇಕು. ವಾರದೊಳಗಾಗಿ ಕಾಶ್ಮೀರದಲ್ಲಿ ಶಾಂತಿ ನೆಲೆಯೂರುವಂತೆ ಮಾಡಬೇಕು ಎಂದು ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com