''ಕಾವೇರಿ ನೀರು ಬಿಡುಗಡೆ ವಿಚಾರವಾಗಿ ನಡೆಯುತ್ತಿರುವ ಬೆಳವಣಿಗೆಯಿಂದ ವೈಯಕ್ತಿಕವಾಗಿ ನನಗೆ ನೋವಾಗಿದೆ. ಹಿಂಸಾಚಾರದಿಂದ ಯಾವುದೇ ಸಮಸ್ಯೆಗೂ ಪರಿಹಾರ ಸಿಗುವುದಿಲ್ಲ. ಪ್ರಜಾಪ್ರಭುತ್ವದಲ್ಲಿ, ಸಂಯಮ ಮತ್ತು ಪರಸ್ಪರ ಮಾತುಕತೆ ಮೂಲಕ ಪರಿಹಾರ ಕಂಡುಕೊಳ್ಳಬಹುದು. ಕಾನೂನಿನ ಚೌಕಟ್ಟಿನೊಳಗೆ ಮಾತುಕತೆ ಮೂಲಕ ಮಾತ್ರ ಈ ವಿವಾದವನ್ನು ಬಗೆಹರಿಸಿಕೊಳ್ಳಬಹುದಷ್ಟೆ. ಕಾನೂನನ್ನು ಮುರಿಯುವುದು ಅದಕ್ಕೆ ಪರ್ಯಾಯ ಮಾರ್ಗವಲ್ಲ. ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ಹಿಂಸಾಚಾರ, ಗಲಭೆಗಳಿಂದ ಬಡಜನತೆಗೆ ನಷ್ಟ, ತೊಂದರೆಯುಂಟಾಗುತ್ತಿದ್ದು, ದೇಶದ ಆಸ್ತಿ-ಪಾಸ್ತಿಗೆ ಹಾನಿಯಾಗುತ್ತಿದೆ ಎಂದು ಅವರು ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ.