

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ಉಂಟಾದ ಹಿಂಸಾಚಾರ ಕುರಿತಂತೆ ಸಲ್ಲಿಸಲಾಗಿದ್ದ ಅರ್ಜಿಯೊಂದನ್ನು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಬುಧವಾರ ಒಪ್ಪಿಗೆ ಸೂಚಿಸಿದೆ.
ಕಾವೇರಿ ವಿವಾದ ಸಂಬಂಧ ಸುಪ್ರೀಂಕೋರ್ಟ್ ಆದೇಶ ಹೊರಡಿಸುತ್ತಿದ್ದಂತೆ ಎರಡು ರಾಜ್ಯಗಳಲ್ಲೂ ಹಿಂಸಾಚಾರಗಳು ಸೃಷ್ಟಿಯಾಗಿದ್ದವು. ಈ ಹಿನ್ನೆಲೆಯಲ್ಲಿ ಕನ್ಯಾಕುಮಾರಿ ಮೂಲಕ ಹೋರಾಗಾರರೊಬ್ಬರು ಹಿಂಸಾಚಾರದಲ್ಲಿ ಭಾಗಿಯಾದ ರಾಜ್ಯಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.
ಈ ಆರ್ಜಿಯನ್ನು ಇಂದು ಪರಿಶೀಲನೆ ನಡೆಸಿರುವ ಸುಪ್ರೀಂಕೋರ್ಟ್ ಅರ್ಜಿಯನ್ನು ಪರಿಗಣಿಸಿದ್ದು, ಗುರುವಾರ ವಿಚಾರಣೆ ನಡೆಸುವುದಾಗಿ ಹೇಳಿದೆ.