ಕಾಶ್ಮೀರಿ ಪ್ರತ್ಯೇಕತಾವಾದಿಗಳಿಗೆ ಸರ್ಕಾರಿ ಸೌಲಭ್ಯ: ಪಿಐಎಲ್ ವಿಚಾರಣೆ ಇಂದು

ಕಾಶ್ಮೀರಿ ಪ್ರತ್ಯೇಕತಾವಾದಿಗಳಿಗೆ ಸರ್ಕಾರಿ ಸೌಲಭ್ಯ ನೀಡುತ್ತಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಪಿಐಎಲ್ ವಿಚಾರಣೆಯನ್ನು ಸೆ.14 ರಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ.
ಕಾಶ್ಮೀರ ಪ್ರತ್ಯೇಕತಾವಾದಿಗಳು
ಕಾಶ್ಮೀರ ಪ್ರತ್ಯೇಕತಾವಾದಿಗಳು

ನವದೆಹಲಿ: ಕಾಶ್ಮೀರಿ ಪ್ರತ್ಯೇಕತಾವಾದಿಗಳಿಗೆ ಸರ್ಕಾರಿ ಸೌಲಭ್ಯ ನೀಡುತ್ತಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಪಿಐಎಲ್ ವಿಚಾರಣೆಯನ್ನು ಸೆ.14 ರಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ.

ಪ್ರತ್ಯೇಕತಾವಾದಿಗಳು ತಮಗೆ ಭಾರತ ಸರ್ಕಾರದಿಂದ ಸಿಗುತ್ತಿರುವ ಸೌಲಭ್ಯವನ್ನು ಭಾರತ ವಿರೋಧಿ ಚಟುವಟಿಕೆಗಳಿಗೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ, ಭಾರತ ಸರ್ಕಾರ ಪ್ರತ್ಯೇಕತಾವಾದಿಗಳಿಗಾಗಿಯೇ ವಾರ್ಷಿಕ 100 ಕೋಟಿ ರೂಪಾಯಿಯಷ್ಟು ಹಣವನ್ನು ಖರ್ಚು ಮಾಡುತ್ತಿದೆ, ಇದನ್ನು ಕೂಡಲೇ ನಿಲ್ಲಿಸಲು ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿ ಅಡ್ವೋಕೇಟ್ ಎಂಎಲ್ ಶರ್ಮಾ ಸುಪ್ರೀಂ ಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ಮಧ್ಯಾಹ್ನ 2 ಗಂಟೆಗೆ ನಡೆಯಲಿದೆ.

ಕಾಶ್ಮೀರಕ್ಕೆ ಭೇಟಿ ನೀಡಿದ್ದ ಸರ್ವಪಕ್ಷ ನಿಯೋಗದೊಂದಿಗೆ ಮಾತುಕತೆ ನಡೆಸಲು ಪ್ರತ್ಯೇಕತಾವಾದಿಗಳ ಸಂಘಟನೆಗಳು ನಿರಾಕರಿಸಿದ್ದವು. ಈ ಬೆಳವಣಿಗೆ ನಂತರ ಕೇಂದ್ರ ಸರ್ಕಾರ ಪ್ರತ್ಯೇಕತಾವಾದಿಗಳಿಗೆ ನೀಡಲಾಗುತ್ತಿರುವ ಸರ್ಕಾರಿ ಸೌಲಭ್ಯಗಳನ್ನು ಹಿಂಪಡೆಯುವ ಸೂಚನೆ ನೀಡಿತ್ತು. ಇತ್ತೀಚಿನ ಮಾಹಿತಿ ಪ್ರಕಾರ, ಕೇಂದ್ರ ಸರ್ಕಾರ ಪ್ರತ್ಯೇಕತಾವಾದಿಗಳ ಬ್ಯಾಂಕ್ ಖಾತೆಗಳನ್ನು ಪರಿಶೀಲನೆ ನಡೆಸುವುದರೊಂದಿಗೆ ಪ್ರತ್ಯೇಕತಾವಾದಿಗಳ ವಿರುದ್ಧದ ಪ್ರಕರಣಗಳ ವಿಚಾರಣೆಯನ್ನು ತ್ವರಿತವಾಗಿ ಮುಕ್ತಾಯಗೊಳಿಸಲು ತೀರ್ಮಾನಿಸಿದೆ ಎನ್ನಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com