
ನವದೆಹಲಿ: ಅಫ್ಘಾನಿಸ್ತಾನದ ಅಧ್ಯಕ್ಷ ಅಶ್ರಫ್ ಘನಿ ಸೆ.14 ರಿಂದ ಭಾರತ ಪ್ರವಾಸ ಕೈಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಅಶ್ರಫ್ ಘನಿ ಅವರನ್ನು ಬರಮಾಡಿಕೊಂಡಿದ್ದಾರೆ.
ಅಧ್ಯಕ್ಷರಾದ ಬಳಿಕ ಎರಡನೇ ಬಾರಿಗೆ ಅಶ್ರಫ್ ಘನಿ ಭಾರತಕ್ಕೆ ಭೇಟಿ ನೀಡುತ್ತಿದ್ದು, ದ್ವಿಪಕ್ಷೀಯ ಮಾತುಕತೆ ಬಳಿಕ ಭಾರತ- ಅಫ್ಘಾನಿಸ್ತಾನ ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಿವೆ ಎಂದು ವಿದೇಶಾಂಗ ಇಲಾಖೆ ವಕ್ತಾರ ವಿಕಾಸ್ ಸ್ವರೂಪ್ ಟ್ವೀಟ್ ಮಾಡಿದ್ದಾರೆ.
ದಿನಾಂತ್ಯದ ವೇಳೆಗೆ ಅಶ್ರಫ್ ಘನಿ ಹಾಗೂ ವಿದೇಶಾಂಗ ಇಲಾಖೆ ರಾಜ್ಯ ಸಚಿವ ವಿ.ಕೆ ಸಿಂಗ್ ವ್ಯಾಪಾರ ಸಭೆಯೊಂದನ್ನುದ್ದೇಶಿಸಿ ಮಾತನಾಡಲಿದ್ದಾರೆ. ಭಾರತ ಪ್ರವಾಸದಲ್ಲಿರುವ ಅಶ್ರಫ್ ಘನಿ ಇನ್ಸ್ಟಿಟ್ಯೂಟ್ ಆಫ್ ಡಿಫೆನ್ಸ್ ಸ್ಟಡೀಸ್ ಹಾಗೂ ಅನಾಲಿಸಿಸ್ ನಲ್ಲಿ ಭಾಷಣ ಮಾಡಲಿದ್ದಾರೆ.
Advertisement