
ನವದೆಹಲಿ: 9/16/2016ಜೈನ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಬೆಡ್ ಸಿಗುತ್ತಿಲ್ಲ ಎಂಬ ಆರೋಪವನ್ನು ನಿರಾಕರಿಸಿದ ಅವರು, ದೆಹಲಿ ಸರ್ಕಾರದ ವ್ಯಾಪ್ತಿಗೆ ಒಳಪಡುವ ಸರ್ಕಾರಿ ಆಸ್ಪತ್ರೆಗಳಲ್ಲಿ 1.500 ಬೆಡ್ ಗಳು ಖಾಲಿ ಇವೆ ಎಂದು ಮಾಹಿತಿ ನೀಡಿದರು.
ಚಿಕನ್ ಗುನ್ಯ ಮತ್ತು ಡೆಂಗ್ಯೂಯಿಂದ ಬಳಲುತ್ತಿರುವ ಹೊರರಾಜ್ಯದ ರೋಗಿಗಳು ದೆಹಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೀಗಾಗಿ ದೆಹಲಿಯಲ್ಲಿರುವ ರೋಗಿಗಳ ಮಾಹಿತಿಯನ್ನು ಪ್ರತ್ಯೇಕಗೊಳಿಸಲು ಸಾಧ್ಯವಾಗುತ್ತಿಲ್ಲ ಎಂದು ಅವರು ತಿಳಿಸಿದ್ದಾರೆ,
ದೆಹಲಿ ಮುನ್ಸಿಪಲ್ ಕಾರ್ಪೋರೇಷನ್ ಮಾಹಿತಿ ಪ್ರಕಾರ, 1,158 ಡೆಂಗ್ಯೂ, 1.057 ಚಿಕನ್ ಗುನ್ಯಾ ಹಾಗೂ 21 ರೋಗಿಗಳು ಮಲೇರಿಯಾದಿಂದ ಬಳಲುತ್ತಿದ್ದಾರೆ ಎಂದು ತಿಳಿದು ಬಂದಿದೆ.
2015 ರಲ್ಲಿ ಅತಿ ಹೆಚ್ಚಿನ ಡೆಂಗ್ಯೂ ಪ್ರಕರಣಗಳು ದಾಖಲಾಗಿದ್ದಾಗಿ ತಿಳಿದು ಬಂದಿದೆ. 15,876 ಮಂದಿ ಡೆಂಗ್ಯೂ ಪೀಡಿತರಾಗಿದ್ದರು ಎಂದು ದೆಹಲಿ ಮುನ್ಸಿಪಲ್ ಕಾರ್ಪೋರೇಷನ್ ಅಂಕಿ ಅಂಶ ನೀಡಿದೆ.
Advertisement