ಜಿಜ್ನೂರ್ ಜಿಲ್ಲೆಯ ಪೇದ ಗ್ರಾಮದಲ್ಲಿ ಬೆಳಗ್ಗೆ 8.15ರ ಸುಮಾರಿಗೆ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಗೆ ಮತ್ತೊಂದು ಸಮುದಾಯದ ಯುವಕರು ಕಿರುಕುಳ ನೀಡಿದ್ದರಿಂದ ಎರಡು ಸಮುದಾಯಗಳ ನಡುವಿನ ಮಾರಾಮಾರಿಗೆ ಕಾರಣವಾಗಿದೆ. ಈ ಮಾರಾಮಾರಿಯಲ್ಲಿ ಮೂವರು ಸಾವನ್ನಪ್ಪಿದ್ದು, 12 ಮಂದಿಗೆ ಗಾಯಗಳಾಗಿದ್ದು, ಐವರ ಪರಿಸ್ಥಿತಿ ಗಂಭೀರವಾಗಿದ್ದು ಗಾಯಾಳುಗಳನ್ನು ಮೀರುತ್ ನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.