ಕೇಂದ್ರ ಸಚಿವ ಜೆಪಿ ನಡ್ಡಾ ಮೇಲೆ ಮಸಿ ಎರಚಿದ ಉದ್ರಿಕ್ತ ಏಮ್ಸ್ ವಿದ್ಯಾರ್ಥಿಗಳು

ಏಮ್ಸ್ ನ ವೈದ್ಯಕೀಯ ವಿದ್ಯಾರ್ಥಿಗಳು ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡಾ ಅವರು ವಿದ್ಯಾರ್ಥಿಗಳ ಬೇಡಿಕೆಯನ್ನು ಆಲಿಸುತ್ತಿಲ್ಲವೆಂದು ಆಕ್ರೋಶಗೊಂಡು ಅವರ ಮೇಲೆ...
ಜೆಪಿ ನಡ್ಡಾ
ಜೆಪಿ ನಡ್ಡಾ
Updated on
ಭೋಪಾಲ್: ಏಮ್ಸ್ ನ ವೈದ್ಯಕೀಯ ವಿದ್ಯಾರ್ಥಿಗಳು ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡಾ ಅವರು ವಿದ್ಯಾರ್ಥಿಗಳ ಬೇಡಿಕೆಯನ್ನು ಆಲಿಸುತ್ತಿಲ್ಲವೆಂದು ಆಕ್ರೋಶಗೊಂಡು ಅವರ ಮೇಲೆ ಮಸಿ ಎರಚಿದ ಘಟನೆ ಭೋಪಾಲ್ ನಲ್ಲಿ ನಡೆದಿದೆ. 
ಜೆಪಿ ನಡ್ಡಾ ಅವರು ಇಂದು ಮಧ್ಯಪ್ರದೇಶದ ಭೋಪಾಲ್ ಗೆ ಭೇಟಿ ನೀಡಿ ನೂತನ ವಾರ್ಡ್ ಗಳನ್ನು ಉದ್ಘಾಟಿಸಿದರು. ಬಳಿಕ ಅಲ್ಲಿಂದ ತೆರಳುತ್ತಿದ್ದ ವೇಳೆ ವೈದ್ಯಕೀಯ ವಿದ್ಯಾರ್ಥಿಗಳು ಸಚಿವರ ಮೇಲೆ ಮಸಿ ಎರಚಿ ಪ್ರತಿಭಟನೆ ನಡೆಸಿದರು. 
ತಾವು ಎದುರಿಸುತ್ತಿರುವ ಸಮಸ್ಯೆಗೆ ಸಂಬಂಧಿಸಿದಂತೆ ಏಮ್ಸ್ ವಿದ್ಯಾರ್ಥಿಗಳು ಕೇಂದ್ರ ಸಚಿವರಿಗೆ ಮನವಿ ನೀಡಲು ಮುಂದಾದರು. ಆದರೆ ಸಚಿವರು ಕಾರಿನ ಬಳಿಗೆ ತೆರಳಿದ್ದರಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಅವರ ಮೇಲೆ ಮಸಿ ಎರಚಿದ್ದಾರೆ. ಈ ವೇಳೆ ಓರ್ವ ವಿದ್ಯಾರ್ಥಿಗೆ ಸಣ್ಣಪುಟ್ಟ ಗಾಯಗಳಾಗಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com