ಪಾಕಿಸ್ತಾನ ಭಯೋತ್ಪಾದಕ ರಾಷ್ಟ್ರ, ವಿಶ್ವ ಸಮುದಾಯದೆದುರು ಪಾಕ್ ನ್ನು ಒಂಟಿ ಮಾಡಬೇಕು: ರಾಜನಾಥ್ ಸಿಂಗ್

ಜಮ್ಮು-ಕಾಶ್ಮೀರದಲ್ಲಿ ನಡೆದಿರುವ ಭಯೋತ್ಪಾದಕ ದಾಳಿ ನಡೆದಿರುವುದಕ್ಕೆ ಪಾಕಿಸ್ತಾನ ಕಾರಣ ಎಂದಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಪಾಕಿಸ್ತಾನವನ್ನು ಭಯೋತ್ಪಾದಕ ರಾಷ್ಟ್ರ ಎಂದು ಹೇಳಿದ್ದಾರೆ.
ರಾಜನಾಥ್ ಸಿಂಗ್
ರಾಜನಾಥ್ ಸಿಂಗ್
Updated on: 

ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ನಡೆದಿರುವ ಭಯೋತ್ಪಾದಕ ದಾಳಿ ನಡೆದಿರುವುದಕ್ಕೆ ಪಾಕಿಸ್ತಾನ ಕಾರಣ ಎಂದಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಪಾಕಿಸ್ತಾನವನ್ನು ಭಯೋತ್ಪಾದಕ ರಾಷ್ಟ್ರ ಎಂದು ಹೇಳಿದ್ದಾರೆ.

ಕಾಶ್ಮೀರದ ಉರಿಯಲ್ಲಿ ನಡೆದಿರುವ ಭಯೋತ್ಪಾದಕ ದಾಳಿಯಿಂದ ತೀವ್ರ ಅಘಾತ ಉಂಟಾಗಿದೆ. ನಡೆದಿರುವ ಉಗ್ರ ದಾಳಿಗೆ ಪಾಕಿಸ್ತಾನದ ನೇರ ಬೆಂಬಲವಿದೆ. ಭಯೋತ್ಪಾದಕ ರಾಷ್ಟ್ರವಾಗಿರುವ ಪಾಕಿಸ್ತಾನವನ್ನು ವಿಶ್ವದಲ್ಲಿ ಒಂಟಿ ಮಾಡಬೇಕು ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ.

ಪಾಕಿಸ್ತಾನ ಭಯೋತ್ಪಾದಕರಿಗೆ ಬೆಂಬಲ ನೀಡುವುದನ್ನು ಮುಂದುವರೆಸಿದೆ. ವಿಶ್ವ ಸಮುದಾಯದಿಂದ ಪಾಕಿಸ್ತಾನಕ್ಕೆ ಬೆಂಬಲ ಸಿಗದಂತೆ ಪ್ರತ್ಯೇಕಿಸಬೇಕು ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ. ಸೆ.18 ರಂದು ಬೆಳಿಗ್ಗೆ 5:30 ರ ವೇಳೆಗೆ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಹೊಂದಿದ ಭಯೋತ್ಪಾದಕರು ಉರಿ ಸೆಕ್ಟರ್ ನಲ್ಲಿರುವ ಸೇನಾ ಪ್ರಧಾನ ಕಚೇರಿ ಮೇಲೆ ದಾಳಿ ನಡೆಸಿದ್ದರು. ಈ ದಾಳಿಯಲ್ಲಿ 17 ಯೋಧರು ಹುತಾತ್ಮರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com