ಶಹಾಬುದ್ದೀನ್ ಗೆ ಸಂಕಷ್ಟ, ಆರ್ ಜೆಡಿ ಮಾಜಿ ಸಂಸದನಿಗೆ ಸುಪ್ರೀಂ ನೋಟಿಸ್

ವಿವಾದಿತ ಆರ್ ಜೆಡಿ ಪ್ರಭಾವಿ ನಾಯಕ ಮೊಹಮ್ಮದ್ ಶಹಾಬುದ್ದೀನ್ ಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜಾಮೀನು ರದ್ದುಗೊಳಿಸುವುದಕ್ಕೆ...
ಶಹಾಬುದ್ದೀನ್
ಶಹಾಬುದ್ದೀನ್
ನವದೆಹಲಿ: ವಿವಾದಿತ ಆರ್ ಜೆಡಿ ಪ್ರಭಾವಿ ನಾಯಕ ಮೊಹಮ್ಮದ್ ಶಹಾಬುದ್ದೀನ್ ಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜಾಮೀನು ರದ್ದುಗೊಳಿಸುವುದಕ್ಕೆ ಸಂಬಂಧಿಸಿದಂತೆ ಆರ್ ಜೆಡಿ ಮಾಜಿ ಸಂಸದನಿಗೆ ಸೋಮವಾರ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಜಾಮೀನು ರದ್ದು ಕೋರಿ ಸಲ್ಲಿಸಿಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿನಾಕಿಚಂದ್ರ ಘೋಸ್ ಮತ್ತು ನ್ಯಾಯಮೂರ್ತಿ ಅಮಿತವ ರಾಯ್ ಅವರನ್ನೊಳಗೊಂಡ ಸುಪ್ರೀಂ ಪೀಠ, ಶಹಾಬುದ್ದೀನ್ ಗೆ ನೋಟಿಸ್ ಜಾರಿ ಮಾಡಿ, ವಿಚಾರಣೆಯನ್ನು ಸೆಪ್ಟೆಂಬರ್ 26ಕ್ಕೆ ಮುಂದೂಡಿದೆ.
ಇನ್ನೂ ಬಿಹಾರ ಸರ್ಕಾರ ಸಹ ಶಹಾಬುದ್ದೀನ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ ಮಾಡಬೇಕು ಎಂದು ಮನವಿ ಮಾಡಿದೆ.
ಶಹಾಬುದ್ದೀನ್ ಜಾಮೀನು ರದ್ದುಗೊಳಿಸಬೇಕು ಎಂದು ಬಿಹಾರ ಸರ್ಕಾರ ಪರ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರು ಕಳೆದ ಶುಕ್ರವಾರ ಸುಪ್ರೀಂ ಕೋರ್ಟ್ ಮನವಿ ಸಲ್ಲಿಸಿದ್ದಾರೆ. ಅಲ್ಲದೆ ಸಿವಾನ್ ಮೂಲದ ಚಂದ್ರಕೇಶ್ವರ್ ಪ್ರಸಾದ್ ಎಂಬುವವರು ಸಹ ಆರ್ ಜೆಡಿ ಮಾಜಿ ಸಂಸದ ಶಹಾಬುದ್ದೀನ್ ಗೆ ಜಾಮೀನು ಮಂಜೂರು ಮಾಡಿದ್ದ ಪಾಟ್ನಾ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಶಹಾಬುದ್ದೀನ್ ಅವರು ಪ್ರಸಾದ್ ಅವರ ಮೂವರು ಮಕ್ಕಳನ್ನು ಹತ್ಯೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ.
ರಾಜ್ ದಿಯೊ ರಂಜನ್ ಕೊಲೆ ಪ್ರಕರಣ ಹಾಗೂ ಸಿವಾನ್‍  ಎಂಬಲ್ಲಿ ನಡೆದ ಸಹೋದರರ ಹತ್ಯೆ ಪ್ರಕರಣದಲ್ಲಿನ ಸಾಕ್ಷಿದಾರರನ್ನು ಹತ್ಯೆಗೈದ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಶಹಾಬುದ್ದೀನ್ 11 ವರ್ಷಗಳ ನಂತರ ಕಳೆದ ಶನಿವಾರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com