ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ

ಉಗ್ರ ದಾಳಿಯ 'ಉರಿ': ಪಾಕ್ ವಿರುದ್ಧ ನಿರ್ಣಾಯಕ ಕ್ರಮಕ್ಕೆ ಹೆಚ್ಚಿದ ಒತ್ತಡ

ಸೆ.19 ರಂದು ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಸರಣಿ ಸಭೆಗಳು ನಡೆದಿದ್ದು, ಎಲ್ಲಾ ಸಭೆಗಳಲ್ಲೂ ಪಾಕಿಸ್ತಾನದ ವಿರುದ್ಧ ನಿರ್ಣಾಯಕ ಕ್ರಮ ಕೈಗೊಳ್ಳುವಂತೆ ಭಾರತ ಸರ್ಕಾರಕ್ಕೆ ಒತ್ತಡ ಎದುರಾಗಿದೆ.

ನವದೆಹಲಿ: ಉರಿ ಸೆಕ್ಟರ್ ನಲ್ಲಿ ಪಾಕಿಸ್ತಾನದ ಭಯೋತ್ಪಾದಕರು ನಡೆಸಿರುವ ದಾಳಿ ಹಿನ್ನೆಲೆಯಲ್ಲಿ ಸೆ.19 ರಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಸರಣಿ ಸಭೆಗಳು ನಡೆದಿದ್ದು, ಎಲ್ಲಾ ಸಭೆಗಳಲ್ಲೂ ಪಾಕಿಸ್ತಾನದ ವಿರುದ್ಧ ನಿರ್ಣಾಯಕ ಕ್ರಮ ಕೈಗೊಳ್ಳುವಂತೆ ಭಾರತ ಸರ್ಕಾರಕ್ಕೆ ಒತ್ತಡ ಎದುರಾಗಿದೆ.

ಸಭೆಯಲ್ಲಿ ಭಾಗವಹಿಸಿದ್ದ ಪ್ರತಿಯೊಬ್ಬರೂ ಸಹ ಭಾರತ ಸರ್ಕಾರ ಪಾಕಿಸ್ತಾನದ ವಿರುದ್ಧ ನಿರ್ಣಾಯಕ, ಕಠಿಣ ಕ್ರಮ ಕೈಗೊಳ್ಳಬೇಕೆಂಬ ಅಭಿಪ್ರಾಯ ವ್ಯಕ್ತವಾಗಿದೆ. ಇನ್ನು ಪಾಕಿಸ್ತಾನದ ಉಗ್ರರು ಭಾರತದ ಮೇಲೆ ದಾಳಿ ನಡೆಸಿರುವ ಹಿನ್ನೆಲೆಯಲ್ಲಿ ವರ್ಷಾಂತ್ಯಕ್ಕೆ ಪಾಕಿಸ್ತಾನದಲ್ಲಿ ನಡೆಯಲಿರುವ ಸಾರ್ಕ್ ಸಮ್ಮೇಳನದಲ್ಲಿ ಭಾಗಿಯಾಗುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಇನ್ನು ಯಾವುದೇ ನಿರ್ಧಾರ ಕೈಗೊಂಡಿಲ್ಲ. ಇದೇ ವೇಳೆ ವಿಶ್ವ ಸಂಸ್ಥೆಯ 71 ನೇ ಮಹಾಸಭೆಯಲ್ಲಿ ಭಾಗವಹಿಸುತ್ತಿರುವ ವಿದೇಶಾಂಗ ಇಲಾಖೆಯ ಸಚಿವೆ ಸುಷ್ಮಾ ಸ್ವರಾಜ್, ಉರಿ ಸೆಕ್ಟರ್ ನಲ್ಲಿ ಪಾಕಿಸ್ತಾದ ಭಯೋತ್ಪಾದಕರು ನಡೆಸಿರುವ ದಾಳಿಯನ್ನು ವಿಶ್ವ ಸಂಸ್ಥೆಯಲ್ಲಿ ಪ್ರಸ್ತಾಪಿಸಲಿದ್ದಾರೆ.

ಪಾಕಿಸ್ತಾನದ ಕೃತ್ಯದ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿದೇಶಾಂಗ ಇಲಾಖೆಯ ರಾಜ್ಯ ಸಚಿವ ಜನರಲ್ ವಿಕೆ ಸಿಂಗ್, ಭಾವನಾತ್ಮಕ ನೆಲೆಗಟ್ಟಿನ ಮೇಲೆ ನಾವು ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ, ಆದರೆ ಪಾಕಿಸ್ತಾನಕ್ಕೆ ಮುಟ್ಟಿ ನೋಡಿಕೊಳ್ಳುವಂತಹ ತಿರುಗೇಟು ನೀಡುವುದಂತೂ ಖಂಡಿತ, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಶೀಘ್ರವೇ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com