ಸಾಂದರ್ಭಿಕ ಚಿತ್ರ
ದೇಶ
ಜಮ್ಮು ಮತ್ತು ಕಾಶ್ಮೀರದ ಉರಿಯಲ್ಲಿ 10 ಉಗ್ರರ ಹತ್ಯೆ
18 ಯೋಧರನ್ನು ಬಲಿ ಪಡೆದ ಉಗ್ರ ದಾಳಿಯ ಎರಡು ದಿನದ ನಂತರ ಜಮ್ಮು ಮತ್ತು ಕಾಶ್ಮೀರದ ಉರಿಯಲ್ಲಿ ಭಾರತೀಯ...
ಶ್ರೀನಗರ: 18 ಯೋಧರನ್ನು ಬಲಿ ಪಡೆದ ಉಗ್ರ ದಾಳಿಯ ಎರಡು ದಿನದ ನಂತರ ಜಮ್ಮು ಮತ್ತು ಕಾಶ್ಮೀರದ ಉರಿಯಲ್ಲಿ ಭಾರತೀಯ ಸೇನೆ ಮಂಗಳವಾರ 10 ಉಗ್ರರನ್ನು ಎನ್ ಕೌಂಟರ್ ಮಾಡಿದೆ.
ಕಾಶ್ಮೀರದ ಲಚಿಪುರದಲ್ಲಿ 15 ಉಗ್ರರ ತಂಡ ಅಕ್ರಮವಾಗಿ ಗಡಿ ನುಸುಳಲು ಯತ್ನಿಸುತ್ತಿದ್ದರು ಎಂದು ಮೂಲಗಳು ತಿಳಿಸಿವೆ.
ಗಡಿ ನುಸುಳಲು ಯತ್ನಿಸುತ್ತಿದ್ದ 15 ಉಗ್ರರ ಪೈಕಿ 10 ಉಗ್ರರನ್ನು ಹತ್ಯೆ ಮಾಡಲಾಗಿದ್ದು, ಉಳಿದ ಉಗ್ರರಾಗಿ ಕಾರ್ಯಾಚರಣೆ ಮುಂದುವರೆದಿದೆ.
ಭಾನುವಾರ ಉರಿ ಸೆಕ್ಟರ್ ನಲ್ಲಿ ನಡೆದ ಉಗ್ರ ದಾಳಿಗೆ ಪಾಕಿಸ್ತಾನವೇ ಕಾರಣ ಎಂದು ಭಾರತ ನೇರವಾಗಿಯೇ ಆರೋಪಿಸಿದೆ. ಅಲ್ಲದೆ ರಾಜತಾಂತ್ರಿಕವಾಗಿ ವಿಶ್ವಸಂಸ್ಥೆ ಸೇರಿದಂತೆ ಇತರೆ ಎಲ್ಲಾ ಅಂತರಾಷ್ಟ್ರೀಯ ವೇದಿಕೆಗಳಲ್ಲೂ ಪಾಕ್ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಲು ನಿರ್ಧರಿಸಿದೆ. ಆದರೆ ಭಾರತದ ಆರೋಪವನ್ನು ಪಾಕಿಸ್ತಾನ ಸ್ಪಷ್ಟವಾಗಿ ತಳ್ಳಿಹಾಕಿದೆ.


