ಎಸ್ಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಅಮರ್ ಸಿಂಗ್ ನೇಮಕ

ಸಮಾಜವಾದಿ ಪಕ್ಷದೊಳಗೆ ಶೀತಲ ಸಮರ ನಡೆಯುತ್ತಿರುವುದ ಮಧ್ಯೆ ಪಕ್ಷದ ವರಿಷ್ಠ ಮುಲಾಯಂ ಸಿಂಗ್...
ಮುಲಾಯಂ ಸಿಂಗ್ ಯಾದವ್, ಅಮರ್ ಸಿಂಗ್(ಸಂಗ್ರಹ ಚಿತ್ರ)
ಮುಲಾಯಂ ಸಿಂಗ್ ಯಾದವ್, ಅಮರ್ ಸಿಂಗ್(ಸಂಗ್ರಹ ಚಿತ್ರ)
ನವದೆಹಲಿ: ಸಮಾಜವಾದಿ ಪಕ್ಷದೊಳಗೆ ಶೀತಲ ಸಮರ ನಡೆಯುತ್ತಿರುವುದ ಮಧ್ಯೆ ಪಕ್ಷದ ವರಿಷ್ಠ ಮುಲಾಯಂ ಸಿಂಗ್ ಯಾದವ್ ರಾಜ್ಯ ಸಭಾ ಸದಸ್ಯ ಅಮರ್ ಸಿಂಗ್ ಅವರನ್ನು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಿದ್ದಾರೆ.
ಇಲ್ಲಿ ಗಮನಿಸಬೇಕಾದ ಅಂಶವೆಂದರೆ ಪಕ್ಷದೊಳಗೆ ಬಿಕ್ಕಟ್ಟು ಭುಗಿಲೇಳಲು ಅಮರ್ ಸಿಂಗ್ ಕಾರಣ ಎಂದು ಪಕ್ಷದ ನಾಯಕರು ಆರೋಪಿಸಿದ್ದರು. ತಮ್ಮ ಸ್ವಹಸ್ತಾಕ್ಷರದಲ್ಲಿ ಬರೆದ ಪತ್ರದ ಮೂಲಕ ಸ್ವತಃ ಮುಲಾಯಂ ಸಿಂಗ್ ಅವರೇ ಈ ಘೋಷಣೆ ಮಾಡಿದ್ದಾರೆ.
ಕಳೆದ ವಾರ ಶಿವಪಾಲ್ ಯಾದವ್ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರಾಗಿ ಮುಲಾಯಂ ಸಿಂಗ್ ಯಾದವ್ ನೇಮಿಸಿದ ನಂತರ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಬಹಿರಂಗವಾಗಿ ವಿರೋಧ ವ್ಯಕ್ತಪಡಿಸಿ ಯಾದವ್ ಕುಟುಂಬದ ಕಲಹ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿತ್ತು. ಈ ಮಧ್ಯೆ ಅಮರ್ ಸಿಂಗ್ ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಿರುವುದು ಕುತೂಹಲ ಮೂಡಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com