ಅಕ್ರಮ ನೇಮಕಾತಿ: ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ವಿರುದ್ಧ ಎಫ್ಐ ಆರ್ ದಾಖಲು

ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಾಲಿವಾಲ್ ಅವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಎಫ್ಐಆರ್ ದಾಖಲಿಸಿದೆ.
ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಾಲಿವಾಲ್
ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಾಲಿವಾಲ್

ನವದೆಹಲಿ: ದೆಹಲಿ ಮಹಿಳಾ ಆಯೋಗಕ್ಕೆ ಆಮ್ ಆದ್ಮಿ ಪಕ್ಷದ ಬೆಂಬಲಿಗರನ್ನು ಅಕ್ರಮವಾಗಿ ನೇಮಕ ಮಾಡಿಕೊಂಡಿರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಾಲಿವಾಲ್ ಅವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಎಫ್ಐಆರ್ ದಾಖಲಿಸಿದೆ.

ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 13(ಡಿ), 409( ನಂಬಿಕೆ ದ್ರೋಹ) ಹಾಗೂ ಸೆಕ್ಷನ್ 120 ಬಿ( ಕ್ರಿಮಿನಲ್ ಸಂಚು) ಅಡಿ ಸ್ವಾತಿ ಮಾಲಿವಾಲ್ ವಿರುದ್ಧ ಎಫ್ಐ ಆರ್ ದಾಖಲಿಸಲಾಗಿದ್ದು, ಅಕ್ರಮ ನೇಮಕಾತಿಗೆ ಸಂಬಂಧಿಸಿದಂತೆ ಕೇಳಲಾಗಿರುವ 27 ಪ್ರಶ್ನೆಗಳಿಗೆ ಒಂದು ವಾರದಲ್ಲಿ ಉತ್ತರಿಸುವಂತೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಾಲಿವಾಲ್ ಗೆ ಸೂಚನೆ ನೀಡಲಾಗಿದೆ.

ಎಫ್ಐ ಆರ್ ದಾಖಲಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸ್ವಾತಿ ಮಾಲಿವಾಲ್, ನನಗೆ ಎಸಿಬಿ 27 ಪ್ರಶ್ನೆಗಳನ್ನು ಕೇಳಿದ್ದು ಒಂದು ವಾರದಲ್ಲಿ ಉತ್ತರಿಸುವಂತೆ ಸೂಚಿಸಿದೆ. ಮಹಿಳಾ ಆಯೋಗದಲ್ಲಿ 85 ಜನರನ್ನು ಹೇಗೆ ನೇಮಕ ಮಾಡಿಕೊಂಡಿದ್ದೀರಿ ಎಂಬ ಪ್ರಶ್ನೆಯನ್ನೂ ಕೇಳಲಾಗಿದೆ ಎಂದು ಹೇಳಿದ್ದಾರೆ.

ದೆಹಲಿ ಮಹಿಳಾ ಆಯೋಗದ ಧ್ವನಿಯನ್ನು ಅಡಗಿಸಲು ನಮ್ಮ ವಿರುದ್ಧ ಆರೋಪ ಮಾಡಲಾಗಿದೆ. ಒಂದೇ ವರ್ಷದಲ್ಲಿ ನಾವು 11,500 ಪ್ರಕರಣಗಳನ್ನು ನಿರ್ವಹಿಸಿದ್ದೇವೆ ಹಾಗೂ 2.25 ಲಕ್ಷ ಕರೆಗಳನ್ನು ಸ್ವೀಕರಿಸಿದ್ದೇವೆ. ಆದರೆ ಈ ಹಿಂದೆ ಇದ್ದ ಮಹಿಳಾ ಆಯೋಗದ ಮುಖ್ಯಸ್ಥರು ಒಂದು ಪ್ರಕರಣವನ್ನಷ್ಟೇ ನಿರ್ವಹಿಸಿದ್ದರು ಎಂದು ಸ್ವಾತಿ ಮಾಲಿವಾಲ್ ಆರೋಪಿಸಿದ್ದಾರೆ. ದೆಹಲಿ ಮಹಿಳಾ ಆಯೋಗಕ್ಕೆ ಆಮ್ ಆದ್ಮಿ ಪಕ್ಷದ ಬೆಂಬಲಿಗರಾದ 85 ಜನರನ್ನು ಅಕ್ರಮವಾಗಿ ನೇಮಕ ಮಾಡಲಾಗಿದೆ ಎಂದು ಆರೋಪಿಸಿ ಮಾಜಿ ಮುಖ್ಯಸ್ಥರಾಗಿದ್ದ ಬರ್ಖಾ ಶುಕ್ಲ ಸಿಂಗ್ ಆರೋಪಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com