ಪಾಕಿಸ್ತಾನವನ್ನು ಭಯೋತ್ಪಾದಕ ರಾಷ್ಟ್ರವೆಂದು ಘೋಷಿಸಿ: ಡೇರಾ ಸಚ್ಚಾ ಸೌದಾ ಮುಖ್ಯಸ್ಥ

ಯೋಧರು ಮಲಗಿರುವಾಗ ಅವರ ಮೇಲೆ ದಾಳಿ ನಡೆಸಿ ಹತ್ಯೆ ಮಾಡುವುದು ಹೇಡಿತನದ ಪರಮಾವಧಿ ಎಂದಿರುವ ಡೇರಾ ಸಚ್ಚಾ ಸೌದಾ ಸಂಘಟನೆ ಮುಖ್ಯಸ್ಥ ಗುರ್‌ಮೀತ್‌ ರಾಮ್‌ ರಹೀಮ್‌ ಸಿಂಗ್‌.....
ಪಾಕಿಸ್ತಾನವನ್ನು ಭಯೋತ್ಪಾದಕ ರಾಷ್ಟ್ರವೆಂದು ಘೋಷಿಸಿ: ಡೇರಾ ಸಚ್ಚಾ ಸೌದಾ ಮುಖ್ಯಸ್ಥ
ಪಾಕಿಸ್ತಾನವನ್ನು ಭಯೋತ್ಪಾದಕ ರಾಷ್ಟ್ರವೆಂದು ಘೋಷಿಸಿ: ಡೇರಾ ಸಚ್ಚಾ ಸೌದಾ ಮುಖ್ಯಸ್ಥ
Updated on

ಚಂಡೀಗಢ: ಯೋಧರು ಮಲಗಿರುವಾಗ ಅವರ ಮೇಲೆ ದಾಳಿ ನಡೆಸಿ ಹತ್ಯೆ ಮಾಡುವುದು ಹೇಡಿತನದ ಪರಮಾವಧಿ ಎಂದಿರುವ ಡೇರಾ ಸಚ್ಚಾ ಸೌದಾ ಸಂಘಟನೆ ಮುಖ್ಯಸ್ಥ ಗುರ್‌ಮೀತ್‌ ರಾಮ್‌ ರಹೀಮ್‌ ಸಿಂಗ್‌, ಪಾಕಿಸ್ತಾನವನ್ನು ಭಯೋತ್ಪಾದಕ ರಾಷ್ಟ್ರವೆಂದು ಘೋಷಿಸಲು ಆಗ್ರಹಿಸಿದ್ದಾರೆ.

ಉರಿಯಲ್ಲಿ ಉಗ್ರ ದಾಳಿ ನಡೆದಿರುವುದರ ಬಗ್ಗೆ ಈಗಾಗಲೇ ಸಾಕಷ್ಟು ಹೇಳಿಕೆಗಳು ಬಂದಿವೆ. ಆದರೆ ಪಾಕಿಸ್ತಾನದ ವಿಷಯವಾಗಿ ಏನನ್ನೂ ಮಾಡಲಾಗಿಲ್ಲ ಎಂದು ಗುರ್‌ಮೀತ್‌ ರಾಮ್‌ ರಹೀಮ್‌ ಸಿಂಗ್‌ ಅಸಮಾಧಾನ ವ್ಯಕ್ತಪಡಿಸಿದ್ದು, ಪಾಕಿಸ್ತಾನವನ್ನು ಉಗ್ರ ರಾಷ್ಟ್ರ ಎಂದು ಗುರುತಿಸಬೇಕು ಎಂದು ಹೇಳಿದ್ದಾರೆ. ಭಯೋತ್ಪಾದನೆಯನ್ನು ಖಂಡಿಸುವ ಹೇಳಿಕೆಗಳು ಸಾಕಾಗುವುದಿಲ್ಲ. ಪಾಕಿಸ್ತಾನವನ್ನು ಭಯೋತ್ಪಾದಕ ರಾಷ್ಟ್ರ ಎಂದು ಘೋಷಿಸಲು ಭಾರತ ಅಂತಾರಾಷ್ಟ್ರೀಯ ಮಟ್ಟದಲ್ಲಿ ಒತ್ತಡ ಹೇರಬೇಕು ಎಂದು ಹೇಳಿದ್ದಾರೆ.
ಪಾಕಿಸ್ತಾನಕ್ಕೆ ಸಿಗುತ್ತಿರುವ ಹಣಕಾಸಿನ ನೆರವನ್ನು ಸ್ಥಗಿತಗೊಳಿಸಿದರೆ ಮಾತ್ರ ಪಾಕ್ ಭಯೋತ್ಪಾದನೆಯನ್ನು ಬಿಡುತ್ತದೆ ಎಂದು ರಾಮ್ ರಹೀಮ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com