ಸಾಮಾನ್ಯ ಬಜೆಟ್ ನೊಂದಿಗೆ ರೈಲ್ವೆ ಬಜೆಟ್ ವಿಲೀನ: ಜನವರಿಯಲ್ಲಿ ಮಜೆಟ್ ಮಂಡನೆಗೆ ಕೇಂದ್ರ ಸಚಿವ ಸಂಪುಟದ ಅಸ್ತು

ಬಜೆಟ್ ಮಂಡನೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದ್ದು, ರೈಲ್ವೆ ಬಜೆಟ್ ನ್ನು ಸಾಮಾನ್ಯ ಬಜೆಟ್ ನೊಂದಿಗೆ ವಿಲೀನಗೊಳಿಸಲು ಒಪ್ಪಿಗೆ ನೀಡಲಾಗಿದೆ.
ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅರುಣ್ ಜೇಟ್ಲಿ
ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅರುಣ್ ಜೇಟ್ಲಿ

ನವದೆಹಲಿ: ಸೆ.21 ರಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಬಜೆಟ್ ಮಂಡನೆಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದ್ದು, ರೈಲ್ವೆ ಬಜೆಟ್ ನ್ನು ಸಾಮಾನ್ಯ ಬಜೆಟ್ ನೊಂದಿಗೆ ವಿಲೀನಗೊಳಿಸಲು ಒಪ್ಪಿಗೆ ನೀಡಲಾಗಿದೆ.

ಇನ್ನು ಸಾಮಾನ್ಯ ಬಜೆಟ್ ಮಂಡನೆಯಲ್ಲೂ ಗಮನಾರ್ಹ ಬದಲಾವಣೆಗಳಾಗಿದ್ದು, ಫೆಬ್ರವರಿ ಬದಲು ಜನವರಿ ತಿಂಗಳಲ್ಲಿ ಸಾಮಾನ್ಯ ಬಜೆಟ್ ಮಂಡನೆ ಮಾಡಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ, ಇದರೊಂದಿಗೆ ಯೋಜನಾ- ಯೋಜನೇತರ ವೆಚ್ಚಗಳ ನಡುವೆ ವರ್ಗಿಕರಣ ಮಾಡುವುದನ್ನು ಕೈ ಬಿಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ.

ಪ್ರಸ್ತುತ ಫೆಬ್ರವರಿ ತಿಂಗಳಲ್ಲಿ ಬಜೆಟ್ ಅಧಿವೇಶನ ನಡೆಯುತ್ತಿದ್ದು, ಜನವರಿ ತಿಂಗಳಲ್ಲಿ ಬಜೆಟ್ ಮಂಡನೆ ಮಾಡುವ ತೀರ್ಮಾನಕ್ಕೆ ಪೂರಕವಾಗಿ ಜನವರಿ 25 ಕ್ಕೂ ಮುನ್ನ ಬಜೆಟ್ ಅಧಿವೇಶನವನ್ನು ಪ್ರಾರಂಭಿಸಲಾಗುತ್ತದೆ. ಅಂತೆಯೇ ಅಕ್ಟೊಬರ್ ವೇಳೆಗೆ ಬಜೆಟ್ ಮಂಡನೆ ತಯಾರಿ ಪ್ರಾರಂಭವಾಗಲಿದ್ದು, ಜಿಡಿಪಿ ಅಂದಾಜು ಫೆ.7 ರ ಬದಲು  ಜ. 7 ರಂದು ಲಭ್ಯವಾಗಲಿದೆ ಎಂದು  ಅರುಣ್ ಜೇಟ್ಲಿ ಮಾಹಿತಿ ನೀಡಿದ್ದಾರೆ. ಕೇಂದ್ರ ಸಚಿವ ಸಂಪುಟದ ನಿರ್ಣಯದಿಂದ ಪ್ರತ್ಯೇಕ ರೈಲ್ವೆ ಬಜೆಟ್ ಮಂಡಿಸುವ 92 ವರ್ಷಗಳ ಪರಿಪಾಠ ಅಂತ್ಯಗೊಳ್ಳಲಿದೆ. 
ಪ್ರತಿ ವರ್ಷದ ಮಾರ್ಚ್ 31 ಕ್ಕೆ ಹಣಕಾಸು ಆರ್ಥಿಕ ವರ್ಷ ಮುಕ್ತಾಯಗೊಳ್ಳುತ್ತಿತ್ತು. ಆದರೆ ಫೆಬ್ರವರಿಯ ಅಂತ್ಯಕ್ಕೆ ಬಜೆಟ್ ಮಂಡನೆಯಾಗುತ್ತಿದ್ದ ಪರಿಣಾಮ, ಅನುದಾನ ಹಂಚಿಕೆ ಹಾಗೂ ಅದನ್ನು ಬಳಕೆ ಮಾಡುವುದಕ್ಕಾಗಿ ವಿವಿಧ ಇಲಾಖೆಗಳು ಮೇ ತಿಂಗಳ ವರೆಗೂ ಕಾಯಬೇಕಿತ್ತು. ಅನುದಾನ ಹಂಚಿಕೆ ಹಾಗೂ ಬಳಕೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಹಣಕಾಸು ವರ್ಷ ಪ್ರಾರಂಭವಾಗುವುದಕ್ಕೂ ಮುನ್ನವೇ ಬಜೆಟ್ ನ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಯೋಜನೆ ರೂಪಿಸಿದೆ. ಇದರ ಭಾಗವಾಗಿ ಫೆಬ್ರವರಿ ಬದಲು ಜನವರಿ ತಿಂಗಳ ಅಂತ್ಯಕ್ಕೆ ಬಜೆಟ್ ನ್ನು ಮಂಡನೆ ಮಾಡಲು ನಿರ್ಧರಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com