ಮಾಜಿ ಸಚಿವ, ಆಪ್ ಶಾಸಕ ಸೋಮನಾಥ್ ಭಾರ್ತಿ ಬಂಧನ

ದೆಹಲಿ ಮಾಜಿ ಸಚಿವ ಹಾಗೂ ಹಾಲಿ ಆಪ್ ಶಾಸಕ ಸೋಮನಾಥ್ ಭಾರ್ತಿ ಅವರನ್ನು ದೆಹಲಿ ಪೊಲೀಸರು ಗುರುವಾರ ಬೆಳಗ್ಗೆ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಸೋಮನಾಥ್ ಭಾರ್ತಿ (ಸಂಗ್ರಹ ಚಿತ್ರ)
ಸೋಮನಾಥ್ ಭಾರ್ತಿ (ಸಂಗ್ರಹ ಚಿತ್ರ)

ನವದೆಹಲಿ: ದೆಹಲಿ ಮಾಜಿ ಸಚಿವ ಹಾಗೂ ಹಾಲಿ ಆಪ್ ಶಾಸಕ ಸೋಮನಾಥ್ ಭಾರ್ತಿ ಅವರನ್ನು ದೆಹಲಿ ಪೊಲೀಸರು ಗುರುವಾರ ಬೆಳಗ್ಗೆ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಕಳೆದ ತಿಂಗಳು ದೆಹಲಿ ಏಮ್ಸ್ ಕಾಲೇಜು ಆವರಣದಲ್ಲಿ ನಡೆದ ಪ್ರತಿಭಟನೆ ವೇಳೆ ಸೋಮನಾಥ್ ಭಾರ್ತಿ ಮತ್ತು ಅವರ ಸಂಗಡಿಗರು ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದರು ಎಂಬ  ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಇದೇ ಗಲಾಟೆ ಸಂಬಂಧ 3 ವಾರಗಳ ಹಿಂದೆಯೇ ಸೋಮನಾಥ್ ಭಾರ್ತಿ ವಿರುದ್ಧ ದೆಹಲಿಯ ಹೌಜ್ ಖಾಸ್ ಪೊಲೀಸ್  ಠಾಣೆಯಲ್ಲಿ ಎಫ್ ಐಆರ್ ಕೂಡ ದಾಖಲಾಗಿತ್ತು.

ಇಂದು ಸೋಮನಾಥ್ ಭಾರ್ತಿ ಅವರನ್ನು ಹೌಜ್ ಖಾಸ್ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com