ಚಲಿಸುವ ರೈಲಿನಲ್ಲಿ 20 ವರ್ಷದ ಅಸ್ಸಾಂ ಯುವತಿ ಮೇಲೆ ಗ್ಯಾಂಗ್ ರೇಪ್

ಚಲಿಸುವ ರೈಲಿನಲ್ಲಿ 20 ವರ್ಷದ ಆದಿವಾಸಿ ಯುವತಿ ಮೇಲೆ ಮೂವರು ಯುವಕರು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಅಸ್ಸಾಂನ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಗುವಾಹತಿ: ಚಲಿಸುವ ರೈಲಿನಲ್ಲಿ 20 ವರ್ಷದ ಆದಿವಾಸಿ ಯುವತಿ ಮೇಲೆ ಮೂವರು ಯುವಕರು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಅಸ್ಸಾಂನ ದಿಬ್ರುಗಢದಲ್ಲಿ ಗುರುವಾರ ರಾತ್ರಿ ನಡೆದಿದೆ.
ಪ್ರಕರಣ ಸಂಬಂಧ ಸರ್ಕಾರಿ ರೈಲ್ವೆ ಪೊಲೀಸರು(ಜಿಆರ್ ಪಿ) ಓರ್ವ ಆರೋಪಿಯನ್ನು ಬಂಧಿಸಿದ್ದು, ಬಂಧಿತ ಆರೋಪಿ ಪ್ರಹ್ಲಾದ್ ಚೆತ್ರಿ ಎಂದು ಗುರುತಿಸಲಾಗಿದೆ.
ಅತ್ಯಾಚಾರಕ್ಕೆ ಒಳಗಾದ ಯುವತಿ ಹಿರಿಯ ಸಹೋದರ ಕಾಮುಕ ಚತ್ರಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು, ಇತರೆ ಇಬ್ಬರು ಆರೋಪಿಗಳಿಗಾಗಿ ಶೋಧ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರಿನಿಂದ ಬೆಂಗಳೂರು- ತಿನ್ಸುಕಿಯಾ ಎಕ್ಸ್ ಪ್ರೆಸ್ ರೈಲಿನಲ್ಲಿ ಆಗಮಿಸುತ್ತಿದ್ದಾಗ ತನ್ನ ಕಂಪಾರ್ಟ್ ಮೆಂಟ್ ನಲ್ಲಿ ಯಾರೂ ಇಲ್ಲದ ವೇಳೆ ಮೂವರು ಯುವಕರು ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವುದಾಗಿ ಯುವತಿ ಆರೋಪಿಸಿದ್ದಾಳೆ.
ರಾತ್ರಿ 11 ಗಂಟೆಯ ಸುಮಾರಿಗೆ ರೈಲು ದಿಬ್ರುಗಢಕ್ಕೆ ಬರುತ್ತಿದ್ದಂತೆ ಬೋಗಿಯಲ್ಲಿದ್ದ ಹೆಚ್ಚು ಕಮ್ಮಿ ಎಲ್ಲಾ ಪ್ರಯಾಣಿಕರು ಇಳಿದು ಹೋದರು. ಈ ವೇಳೆ ಟಾಯಲೇಟ್ ಬಳಿ ನನ್ನನ್ನು ಅಡ್ಡಗಟ್ಟಿ ಅತ್ಯಾಚಾರ ಎಸಗಿದ್ದಾರೆ ಎಂದು ಯುವತಿ ದೂರಿನಲ್ಲಿ ವಿವರಿಸಿದ್ದಾಳೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com